ಗದಗ 23: ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಸಪ್ತಾಹದ ಅಂಗವಾಗಿ ಜನ ಜಾಗೃತಿ ಗೋಡೆ ಬರಹ ಬರೆಯುವ ಮೂಲಕ ಕಾರ್ಯಕ್ರಮಕ್ಕೆ ಗದಗ-ಬೆಟಗೇರಿ ನಗರ ಸಭೆ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕ ಎನ್.ಎಚ್.ನಾಗೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಚ್.ಎಚ್.ಕುಕನೂರ, ಪೌರಾಯುಕ್ತ ಮನ್ಸೂರ ಅಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮಂಜುನಾಥ ಬಮ್ಮನಕಟ್ಟಿ, ಸಿ.ಎಸ್.ಬೊಮ್ಮನಹಳ್ಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಿತ್ರಕಲಾ ಶಿಕ್ಷಕರು ಜನಜಾಗೃತಿಯ ಗೋಡೆ ಬರಹಗಳ ಚಿತ್ರಿಸಿದರು.