ಹಾವೇರಿ೨೨: ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿಗಾಗಿ ಹಾವೇರಿ ನಗರದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹ ಹಾಗೂ ಪ್ರತಿಜ್ಞಾವಿಧಿ ಬೋದನೆ ಮೂಲಕ ಅರಿವು ಮೂಡಿಸಲಾಯಿತು.
ನಗರದ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು ನಗರದ ವಿವಿಧ ಪ್ರಮುಖ ಬೀಧಿಗಳಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಬಟ್ಟೆಯ ಮೇಲೆ ಸಹಿ ಹಾಕುವುದರ ಮೂಲಕ ಹೆಣ್ಣು ಮಗುವನ್ನು ರಕ್ಷಿಸುತ್ತೇವೆ ಎಂಬ ಸಂದೇಶವನ್ನು ಬಿತ್ತರಿಸಿದರು.
ಮಂಗಳವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ಇವರ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಜಾಗೃತಿ ಮೆರವಣಿಗೆ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ತೆರಳಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮಕ್ಕೆ ಶಾಸಕರಾದ ನೆಹರು ಓಲೇಕಾರ ಅವರು ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪಿ.ವೈ.ಶೆಟ್ಟೆಪ್ಪನವರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ಪಾಟೀಲ ಇತರ ಅಧಿಕಾರಿಗಳು, ಸಂಘ-ಸಂಸ್ಥೆ ಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು