ಭಗೀರಥರ ತಪಸ್ಸು ನಮ್ಮ ದುಡಿಮೆ ಮತ್ತು ದಿನನಿತ್ಯದ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು
Bhagirath's penance should be instilled in our work and daily life
ಬ್ಯಾಡಗಿ 27 : ರಾಜನಾಗಿ, ಋಷಿಯಾಗಿ ಭಗೀರಥರು ಸಮಾಜಕ್ಕೆ ಒಂದು ದೊಡ್ಡ ಸಂದೇಶವನ್ನು ನೀಡಿದ್ದಾರೆ. ಅವರು ತಮ್ಮ ಛಲ ಹಾಗೂ ಪರಿಶ್ರಮದ ಮೂಲಕ ಗಂಗೆಯನ್ನೇ ಧರೆಗೆ ತಂದವರು. ಭಗೀರಥರ ತಪಸ್ಸು ಹಾಗೂ ಪರಿಶ್ರಮದ ಮನೋಭಾವವನ್ನು ನಮ್ಮ ದುಡಿಮೆ ಮತ್ತು ದಿನನಿತ್ಯದ ಬದುಕಿನಲ್ಲಿ ಆಳವಡಿಸಿಕೊಳ್ಳಬೇಕು. ರಾಜ್ಯ ಗ್ಯಾರಂಟಿ ಉಪಾಧ್ಯಕ್ಷ ಎಸ್ ಆರ್ ಪಾಟೀಲ್ ಹೇಳಿದರು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಶ್ರಯದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಗೀರಥರ ಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸಿ ಮಾತನಾಡಿದರು.
ಸಮಾಜದಲ್ಲಿರುವ ಅಸಮಾನತೆ, ಅಸ್ಪಶ್ಯತೆ ಹಾಗೂ ಮೌಢ್ಯಗಳನ್ನು ಹೋಗಲಾಡಿಸಲು ಶ್ರಮಿಸಿ ಸಮಾಜಕ್ಕೆ ಕೊಡುಗೆ ನೀಡಿದ ದಾರ್ಶನಿಕರ ಕುರಿತು ಯುವ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಸರ್ಕಾರವು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬಂದಿದ್ದು, ಯುವ ಪೀಳಿಗೆಯು ಮಹನೀಯರ ತತ್ವ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡಾಗ ಜಯಂತಿ ಕಾರ್ಯಕ್ರಮಗಳು ಅರ್ಥಪೂರ್ಣಗೊಳ್ಳುತ್ತದೆ ಎಂದರು.
ತಾಲೂಕು ಅಧ್ಯಕ್ಷ ಮಂಜುನಾಥ ಉಪ್ಪಾರ ಮಾತನಾಡಿ ಯಾವುದೇ ಸಮುದಾಯದ ಪ್ರಗತಿ ಹೊಂದಬೇಕಾದರೆ ಶಿಕ್ಷಣ ಸಂಘಟನೆ ಹೋರಾಟ ಅತ್ಯವಶ್ಯಕ ಸಮಾಜದ ಪ್ರತಿಯೊಂದು ಮಕ್ಕಳಿಗೂ ಉತ್ತಮ ಶಿಕ್ಷಣ ನೀಡಬೇಕು ಉತ್ತಮ ಸಂಸ್ಕಾರದ ಕಲಿಸಬೇಕು ಸಮುದಾಯದ ಜನರು ಮುಖ್ಯವನಿಗೆ ಬಂದು ಸಾಮಾಜಿಕವಾಗಿ ರಾಜಕೀಯವಾಗಿ ಪ್ರಗತಿ ಹೊಂದಲು ಕ್ಷಮಿಸಬೇಕು ಯುವಕರು ಸಕ್ರಿಯವಾಗಿ ಸಮಾಜ ಕೆಲಸಗಳಲ್ಲಿ ಭಾಗವಹಿಸುವುದರಿಂದ ಮುಂದಿನ ನಾಯಕರಾಗಲು ಸಾಧ್ಯ ಎಂದು ಹೇಳಿದರು.
ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ ಮಾತನಾಡಿ ನೀರಿನಿಂದ ಉಪ್ಪು ತಯಾರಿಸಿದವರು ಉಪ್ಪಾರ ಜನಾಂಗದವರಾದರು. ಹಾಗಾಗಿ ಉಪ್ಪಾರ ಜನಾಂಗಕ್ಕೂ ಭಗೀರಥ ಮಹರ್ಷಿಗೂ ಸಂಬಂಧ ಇದೆ. ಕೆಲಸದಲ್ಲಿ ಬದ್ಧತೆ ಮುಖ್ಯ ಯಾವುದೇ ಕೆಲಸದ ಬಗ್ಗೆ ಬದ್ಧತೆ ಇದ್ದಲ್ಲಿ ಮಾತ್ರವೇ ಯಶಸ್ವಿಗೊಳಿಸಲು ಸಾಧ್ಯ ಎಂದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಮಲ್ಲಿಕಾರ್ಜುನ. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಜಿ ಕೋಟಿ.ತಾಲೂಕು ಆಡಳಿತ ಸಿಬ್ಬಂದಿಗಳು, ಉಪ್ಪಾರ ಸಮಾಜ ತಾಲೂಕು ಅಧ್ಯಕ್ಷ ಮಂಜುನಾಥ ಉಪ್ಪಾರ, ಉಪಾಧ್ಯಕ್ಷ ಮಾಲತೇಶ ಉಪ್ಪಾರ, ಶಿವಮೂರ್ತಿ ಉಪ್ಪಾರ, ಸಂಘಟನಾ ಕಾರ್ಯದರ್ಶಿ ವೆಂಕಟೇಶ ಉಪ್ಪಾರ, ಖಜಾಂಚಿ ಚಂದ್ರಶೇಖರ ಆಟದವರ, ಸದಸ್ಯರಾದ ಕೃಷ್ಣಪ್ಪ ಉಪ್ಪಾರ, ವಿಜಯ ಉಪ್ಪಾರ, ರವಿ, ಕೇಶವಮೂರ್ತಿ, ಸಂತೋಷ, ಬಸವರಾಜ ಬಡಗಡ್ಡಿ ಶಿವಣ್ಣ ನಂದೀಶ, ಬಸವರಾಜ ಬಂಕಾಪುರ, ದೇವರಾಜ, ಸುನಿಲ, ಶಿವಣ್ಣ, ಜೊತೆಗೆ ಇನ್ನಿತರ ಉಪ್ಪಾರ ಸಮಾಜದ ಮುಖಂಡರು ಸದಸ್ಯರು ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 