ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಭಂಟನೂರ ಗ್ರಾಮ ಪಂಚಾಯತ್‌ಗೆ ಬೀಗ ಜಡೆದು ಪ್ರತಿಭಟನೆ
Bhantanur Gram Panchayat was locked and protested to solve the problem of drinking water
ತಾಳಿಕೋಟಿ 07: ತಾಲೂಕಿನ ಭಂಟನೂರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಗೊಟಖಂಡಕಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಸೋಮವಾರ ಗ್ರಾಮಸ್ಥರು ಪಂಚಾಯತ್ ಗೆ ಬೀಗ ಜಡೆದು ಪ್ರತಿಭಟನೆ ನಡೆಸಿ ಪಿಡಿಒಗೆ ಮನವಿ ಸಲ್ಲಿಸಿದರು.
ಭಂಟನೂರ ಪಂಚಾಯತ್ ವ್ಯಾಪ್ತಿಗೆ ಬರುವ ಗೊಟಖಂಡಕಿ ಗ್ರಾಮದಲ್ಲಿ ಕಳೆದ 11ದಿನಗಳಿಂದ ಕುಡಿಯುವ ನೀರು ಪೂರೈಕೆ ಆಗದೆ ಜನರು ತೀವ್ರ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಕುರಿತು ಗ್ರಾಪಂ ಪಿಡಿಓ ಹಾಗೂ ಮೇಲಾಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಗೊಟಖಂಡಕಿ ಗ್ರಾಮದಲ್ಲಿ ಜೆಜೆ ಎಂ ಕಾಮಗಾರಿ ಮುಗಿದಿದ್ದು ಇದಕ್ಕೆ ನೀರು ಪೂರೈಸಲು ಖಾಸಗಿ ಮಾಲೀಕರ ಜಮೀನಲ್ಲಿ ನೀರಿನ ಟ್ಯಾಂಕರ್ ನಿರ್ಮಾಣ ಮಾಡಲಾಗಿದ್ದು ಹೊಲದ ಮಾಲೀಕರು ನೀರು ಬಿಡಲು ತಕರಾರು ತೆಗೆದಿದ್ದು ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ. ಈ ಸಮಸ್ಯೆಯನ್ನು ಅಧಿಕಾರಿಗಳು ಪರಿಹರಿಸದೆ ಇರುವುದರಿಂದ ಸಮಸ್ಯೆ ಉಲ್ಬಣಗೊಂಡು ಗ್ರಾಮಸ್ಥರಿಗೆ ತೊಂದರೆಯಾಗಿದೆ.
ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಳೆದ ಒಂದು ತಿಂಗಳಿಂದ ಬೀದಿ ದೀಪಗಳು ಬಂದ್ ಆಗಿವೆ, ಇದರ ಜೊತೆಗೆ 15 ನೇ ಹಣಕಾಸಿನ ಪ್ರವರ್ಗ-1 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅನುದಾನದ ದುರುಪಯೋಗ ಆಗಿದ್ದು ಇದರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನಿನ ಕ್ರಮ ವಹಿಸಬೇಕು. ಗ್ರಾಮದಲ್ಲಿ ಸುಸಜ್ಜಿತ ಚರಂಡಿ ಹಾಗೂ ರಸ್ತೆಗಳು ಇಲ್ಲದೆ ರಸ್ತೆಯ ಮೇಲೆಯೇ ಕೊಳಚೆ ನೀರು ಹರಿದಾಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಎಲ್ಲ ಸಮಸ್ಯೆಗಳು ಆದಷ್ಟು ಬೇಗ ಬಗೆಹರಿಸಬೇಕು ಎಂದು ಗ್ರಾಮಸ್ಥರು ಪಂಚಾಯಿತಿಗೆ ಬೀಗ ಜಡೆದು ಪಂಚಾಯಿತಿಯ ಆವರಣದಲ್ಲಿಯೇ ಪ್ರತಿಭಟನೆ ಆರಂಭಿಸಿದರು.
ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ ದಳವಾಯಿ ಅವರು ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ ಒಂದು ವಾರದ ಒಳಗಾಗಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸುತ್ತೇನೆ ಎಂದು ಗ್ರಾಮಸ್ಥರಿಗೆ ತಿಳಿ ಹೇಳಿ ಮನವೊಲಿಸಿದರು. ಇದಕ್ಕೆ ಗ್ರಾಮಸ್ಥರು ಒಪ್ಪಿಕೊಂಡು ಆದಷ್ಟು ಬೇಗ ಸಮಸ್ಯೆ ಪರಿಹರಿಸದೆ ಹೋದಲ್ಲಿ ಇದಕ್ಕಿಂತಲೂ ಉಗ್ರವಾಗಿ ಪ್ರತಿಭಟನೆ ನಡೆಸಿ ತಾಪಂ ಕಾರ್ಯಾಲಯದ ಮುಂದೆಯೇ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರ ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಬಿ.ಜಿ.ಬಿರಾದಾರ, ಭೀಮನಗೌಡ ಬಿರಾದರ, ಗುರುಪ್ರಸಾದ್ ಬಿ.ಜಿ. ಪ್ರವೀಣ ಬಿ. ಸಾಹೇಬಗೌಡ ಪೋಲಿಸಿ, ಕಾಳಪ್ಪ ಬಡಿಗೇರ, ರಾಮನಗೌಡ ಬಿರಾದಾರ, ದೇವು ಚಟ್ನಳ್ಳಿ, ಸಂಜೀವಪ್ಪ ದಾಸರ, ದೇವಪ್ಪ ಮಾದರ, ಶಂಕ್ರ್ಪ ಹರಿಜನ, ಚಂದ್ರಶೇಖರ ಚಲವಾದಿ, ನಾಗರಾಜ ಕೆ. ದೇವಪ್ಪ ಪೂಜಾರಿ, ಬಸವರಾಜ ನಡಕೂರ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 