ಕರವೇ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಭಾಸ್ಕರ್ ನೇಮಕ
Bhaskar appointed as district president of Karave Yuva Shakti Sangathan
ವಿಜಯನಗರ ಹೊಸಪೇಟೆ 25: ಕರ್ನಾಟಕ ರಕ್ಷಣಾ ವೇದಿಕೆ ಯುವಶಕ್ತಿ ಸಂಘಟನೆಯ ವಿಜಯನಗರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷರಾದ ಆರ್.ವಿಜಯ್‌ಕುಮಾರ್ ಅಣ್ಣನವರು ತಿಳಿಸಿದ್ದಾರೆ.
ವಿಜಯನಗರ ಹೊಸಪೇಟೆಯ ಪ್ರವಾಸಿ ಮಂದಿರದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ನೇಮಕವಾಗಿರುವ ಭಾಸ್ಕರ್ ನಾಯಕ ಅವರಿಗೆ ನೇಮಕಾತಿ ಪತ್ರ ನೀಡಿ ಕನ್ನಡ ನಾಡು ನುಡಿ ನೆಲ ಜಲ ರಕ್ಷಣೆಗಾಗಿ ನಿರಂತರವಾಗಿ ಹೋರಾಟಗಳನ್ನು ಮಾಡುತ್ತಾ ವಿಜಯನಗರ ಜಿಲ್ಲಾ ಎಲ್ಲಾ ತಾಲೂಕುಗಳಲ್ಲಿ ಗ್ರಾಮಗಳಲ್ಲಿ ಕರವೇ ಯುವಶಕ್ತಿ ಸಂಘಟನೆಯನ್ನು ಬಲಿಷ್ಠ ಗೋಳಿಸುವಂತೆ ಸೂಚನೆ ನೀಡಿದರು ಬಳ್ಳಾರಿ ಜಿಲ್ಲಾ ಕರವೇ ಯುವಶಕ್ತಿ ಸಂಘಟನೆ ಅಧ್ಯಕ್ಷರಾದ ಕೆ.ವೆಂಕಯ್ಯ ಚಿತ್ರದುರ್ಗ ಕರವೇ ಯುವಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಷಣ್ಮುಖಪ್ಪ, ಉಪಾಧ್ಯಕ್ಷರಾದ ನಾಗರಾಜ್.ವಿ., ಬಳ್ಳಾರಿ ಜಿಲ್ಲಾ ಕರವೇ ಯುವಶಕ್ತಿ ಸಂಘಟನೆಯ ಆಟೋ ಚಾಲಕರ ವಿಭಾಗದ ಉಪಾಧ್ಯಕ್ಷರಾದ ಬಸವರಾಜ್, ಬಳ್ಳಾರಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಪುಷ್ಪಾ ಹಾಗೂ ವಿಜಯನಗರ ಜಿಲ್ಲೆಯ ಕರವೇ ಯುವಶಕ್ತಿ ಸಂಘಟನೆಯ ಪ್ರಮುಖರು ಹಾಗೂ ಎಲ್ಲಾ ಕಾರ್ಯಕರ್ತರು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕಾರ್ಯಕರ್ತರಾದ ಮೊಹ್ಮದ್ ಬಾಷ, ಕಿರಣ್‌ಕುಮಾರ್, ಓಬಳೇಶ, ಹಾಗೂ ಇತರರು ಭಾಗವಹಿಸಿ ಶುಭಹಾರೈಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 