ಮುಖ್ಯಮಂತ್ರಿ ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಭಾಸ್ಕರ ರಾವ್

ಬೆಂಗಳೂರು, ಆಗಸ್ಟ್ 3  ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಶುಕ್ರವಾರವಷ್ಟೇ ಅಧಿಕಾರ ಸ್ವೀಕರಿಸಿದ ಭಾಸ್ಕರ ರಾವ್, ಶನಿವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿ ಭಾಸ್ಕರ್ ರಾವ್ ಅಲ್ಲಿಂದ ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಅಲೋಕ್ ಕುಮಾರ್ ಅವರನ್ನು ನೂತನ ಬಿಜೆಪಿ ಸರ್ಕಾರ ಶುಕ್ರವಾರ ಏಕಾಏಕೀ ವರ್ಗಾವಣೆ ಮಾಡಿ, ಎಡಿಜಿಪಿ ಭಾಸ್ಕರ್ ಅವರನ್ನು ನೂತನ ಆಯುಕ್ತರಾಗಿ ನೇಮಿಸಿತು. ಅಲೋಕ್ ಕುಮಾರ್ ಅವರನ್ನು ಕರ್ನಾಟಕ ಮೀಸಲು ಪೊಲೀಸ್ ಪಡೆಗೆ ಸರ್ಕಾರ ವರ್ಗಾವಣೆ ಮಾಡಿದೆ.