ಗ್ರಂಥಾಲಯ, ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಸಚಿವರಿಂದ ಭೂಮಿ ಪೂಜೆ
Bhoomi Puja by Minister for construction of library, residential school building
ಗದಗ 5: ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೆ ಗಮನ ಹರಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಹೇಳಿದರು.
ಅವರು ಶನಿವಾರ ಗದಗ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಆಯೋಜಿಸಿದ್ದ ಡಾ.ಎ.ಪಿ.ಜೆ. ಅಬ್ದುಲ ಕಲಾಂ ಮೊರಾರ್ಜಿ ವಸತಿ ಶಾಲೆ ಗ್ರಂಥಾಲಯ ಹಾಗೂ ಗಂಡು ಮಕ್ಕಳ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಮಲ್ಲಸಮುದ್ರದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಂಥಾಲಯ ಹಾಗೂ ಶಾಲಾ ಕಟ್ಟಡ ನಿರ್ಮಾಣಕ್ಕೆ 733 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ನೀಡುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ನೆರೆದ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಬದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಎಸ್.ಎನ್.ಬಳ್ಳಾರಿ, ರವಿ ಮೂಲಿಮನಿ, ಫಾರೂಕ್ ಹುಬ್ಬಳ್ಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಂಘದ ಅಧ್ಯಕ್ಷ ರವಿ ಗುಂಜೀಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 