ಇಂದಿರಾ ಕ್ಯಾಂಟಿನ್ ಕಟ್ಟಡಕ್ಕೆ ಭೂಮಿ ಪೂಜೆ: ಶಾಸಕ ರಾಜುಗೌಡ

ದೇವರಹಿಪ್ಪರಗಿ 21: ಪಟ್ಟಣದ ಪ.ಪಂ ವ್ಯಾಪ್ತಿಯ ಪಶು ಆಸ್ಪತ್ರೆಯ ಸಮೀಪ ಇಂದಿರಾ ಕ್ಯಾಂಟಿನ್ ಕಟ್ಟಡ ನಿರ್ಮಾಣಕ್ಕೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ಭೂಮಿ ಪೂಜೆ ನೆರವೇರಿಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರು, ಸಾರ್ವಜನಿಕರು, ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಗುಣಮಟ್ಟದ ಆಹಾರ ಸಿಗಬೇಕೆಂಬ ಸದುದ್ದೇಶದಿಂದ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಆರಂಭಿಸಿದೆ. ಪಟ್ಟಣದ ಜನರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ಇರುವುದರಿಂದ ಸಾರ್ವಜನಿಕರು ಇಂದಿರಾ ಕ್ಯಾಂಟೀನ್ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಬರುವಂತ ದಿನಗಳಲ್ಲಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರ ಸಹಕಾರದಿಂದ ಮೂಲಭೂತ ಸೌಕರ್ಯ ಕಲ್ಪಿಸುವದರ ಜೊತೆ ವಿವಿಧ ಯೋಜನೆಗಳಿಗೆ ಹಂತ ಹಂತವಾಗಿ ಅನುದಾನ ನೀಡುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು. 

ಇದೇ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟೆ, ಅಧ್ಯಕ್ಷರ ಪ್ರತಿನಿಧಿಯಾದ ಬಸವರಾಜ ದೇವಣಗಾಂವ, ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ, ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ರೀಯಾಜ ಯಲಿಗಾರ,ಪ.ಪಂ ಸದಸ್ಯರುಗಳಾದ ಕಾಸುಗೌಡ ಬಿರಾದಾರ(ಜಲಕತ್ತಿ),ಶಾಂತಯ್ಯ ಜಡಿಮಠ, ಸಿಂಧೂರ ಡಾಲೇರ, ಸುಮಂಗಲಾ ಸೇಬೆನವರ ಮುಖಂಡರುಗಳಾದ ಕಾಸು ಕಡ್ಲೇವಾಡ,ವೀರೇಶ ಕುದುರಿ, ಕಾಸು ವಡ್ಡೋಡಗಿ, ಸೋಮು ದೇವೂರ,ನಾನಾಗೌಡ ಪಾಟೀಲ(ಯರನಾಳ),ಪ.ಪಂ ಅಭಿಯಂತರರಾದ ಗುರುರಾಜ ಬಿರಾದಾರ, ಮುತ್ತುರಾಜ ಹಿರೇಮಠ,ಫೀರೋಜ ಮುಲ್ಲಾ, ಸೇರಿದಂತೆ ಪಟ್ಟಣದ ಪ್ರಮುಖರು, ಗಣ್ಯರು ಹಾಗೂ ಪ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.