ಜೈನ್ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಕ್ಕೆ ಭೂಮಿ ಪೂಜೆ
Bhoomi Puja for Jain Community Hall and Student Hostel
ಹಾವೇರಿ 06: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಹಾವೇರಿ ಜಿಲ್ಲಾ ದಿಗಂಬರ ಜೈನ್ ಸಂಘದ ಸಹಯೋಗದಲ್ಲಿ ಹಾವೇರಿ ಜಿಲ್ಲಾ ಜೈನ್ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯದ ಭೂಮಿ ಪೂಜೆ ಕಾರ್ಯಕ್ರಮ ಹಾವೇರಿ ನಗರದ ದಾನೇಶ್ವರಿ ನಗರದಲ್ಲಿ ಶುಕ್ರವಾರ ಜರುಗಿತು. ಕ್ಷೇತ್ರ ಸೋಂದಾ ಸ್ವಾದಿ ದಿಗಂಬರ ಜೈನ್ ಮಠದ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಮಾನಪ್ಪ ಲಮಾಣಿ ಅವರು ಭೂಮಿ ಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗಣ್ಯರು ಹಾಗೂ ಅತಿಥಿಗಳು ಡಿ.12 ರಿಂದ ಹಾವೇರಿ ನಗರದಲ್ಲಿ ಜರುಗಲಿರುವ ಬೃಹತ್ ಸಿದ್ಧಚಕ್ರ ಆರಾಧನೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಬ್ದುಲ್ ರಶೀದ್ ಮಿರ್ಜಣ್ಣನವರ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಶ್ರೀಮತಿ ಪರಿಮಳಾ ಜೈನ್, ಜಿಲ್ಲಾ ದಿಗಂಬರ ಜೈನ್ ಸಂಘದ ಅಧ್ಯಕ್ಷ ಮಂಜುನಾಥ ತಡಸದ, ಗೌರವಾಧ್ಯಕ್ಷ ಭರತರಾಜ ಹಜಾರಿ, ಪ್ರಧಾನ ಕಾರ್ಯದರ್ಶಿ ವಿಜಯ ಸಾತಗೊಂಡ, ಸಂಚಾಲಕ ಚಂದ್ರನಾಥಕ ಕಳಸೂರ, ಮಾಣಿಕಚಂದ ಲಾಡರ, ಪದ್ಮರಾಜ ಕಳಸೂರ, ಮಹಾವೀರ ಕಳಸೂರ, ಎಸ್.ಎ.ವಜ್ರಕುಮಾರ, ಆದಿರಾಜ ಮುರಗಿ,ರಮೇಶ ಕಳಸೂರ, ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 