ಕೋಡಿಹಳ್ಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
Bhoomi Puja for Kodihalli road development
ಬ್ಯಾಡಗಿ 22 :ರೈತರು, ಸಾರ್ವಜನಿಕರು , ಅಸೂಯೆ ಬಿಟ್ಟು ಒಗ್ಗಟ್ಟಾಗಿ ಹಳ್ಳಿಗಳಲ್ಲಿರುವ ಹೊಲ ಗದ್ದೆಗಳಿಗೆ ತೆರಳಲಿರುವ ರಸ್ತೆಯ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಅವರು ತಾಲೂಕಿನ ಕೋಡಿಹಳ್ಳಿಯಿಂದ ಗೊಂದೇರಿಗೆ ಹೋಗಲಿರುವ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂ.ಗಳ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ರಸ್ತೆ ನಿರ್ಮಿಸಲಾಗುತ್ತಿದೆ. ಕೋಡಿಹಳ್ಳಿಯಿಂದ ಗೊಂದ್ಯರವರಗೆ ರಸ್ತೆ ಹಾಳಾಗಿದ್ದು ಈ ರಸ್ತೆಯನ್ನು ಅಭಿವೃದ್ಧಿ ಪಡಿಸಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದೆಂದರು.
ಈಗಾಗಲೇ ಕೋಡಿಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 1.5 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ರಸ್ತೆಯ ಸುಧಾರಣೆಗೆ ಹೆಚ್ಚಿನ 1 ಕೋಟಿ ರೂ.ಗಳನ್ನು ಕೊಡುವುದಾಗಿ ಭರವಸೆ ನೀಡಿದರು.ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ ಮಾತನಾಡಿ ಶಾಸಕರ ಅವಿರತ ಶ್ರಮದಿಂದ ಇಂದು ತಾಲ್ಲೂಕಿನಲ್ಲಿ ಹಂತ ಹಂತವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿ ಹೊಂದುತ್ತಿದೆ. ಇವರ ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕಾ ಗ್ಯಾರಂಟಿ ಅಧ್ಯಕ್ಷ ಶಂಭನಗೌಡ ಪಾಟೀಲ, ಡಿಸಿಸಿ ಬ್ಯಾಂಕ ನಿರ್ದೇಶಕ ಚನ್ನಬಸಪ್ಪ ಹುಲ್ಲತ್ತಿ, ಸುರೇಶಗೌಡ ಪಾಟೀಲ, ಬಾಷಾಸಾಬ ದೊಡ್ಡಮನಿ, ಹನುಮಂತಪ್ಪ, ಮಾತನವರ, ಗುತ್ತಿಗೆದಾರ ಹನುಮಂತಪ್ಪ ಹಾದಿಮನಿ ಸೇರಿದಂತೆ ಗ್ರಾ.ಪಂ.ಸದಸ್ಯರು ಗ್ರಾಮಸ್ಥರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 