4.50 ಕೋಟಿ ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೆಜ್ ಕಾಮಗಾರಿಗೆ ಭೂಮಿ ಪೂಜೆ
Bhoomi Puja for the bridge and barrage work costing Rs. 4.50 crore
ಅಭಿವೃದ್ಧಿಯತ್ತ ಮಹತ್ವದ ಹೆಜ್ಜೆ
ಬೆಳಗಾವಿ 28: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೂಲಭೂತ ಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಬಡಸ್ ಗ್ರಾಮದಲ್ಲಿ ಸುಮಾರು 4.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬ್ರಿಡ್ಜ್ ಕಂ ಬ್ಯಾರೆಜ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಭರ್ಜರಿ ಚಾಲನೆ ನೀಡಲಾಯಿತು.
ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸ್ತ್ರೋಕ್ತ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಮಹತ್ವದ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು.ಈ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣದಿಂದ ಗ್ರಾಮಕ್ಕೆ ಸಂಪರ್ಕ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ನೀರಿನ ಸಂಗ್ರಹಣೆಗೂ ಅನುಕೂಲವಾಗಲಿದೆ. ರೈತರಿಗೆ ನೀರಾವರಿ ಸೌಲಭ್ಯ ಹೆಚ್ಚಾಗುವ ನೀರೀಕ್ಷೆ ಇದ್ದು, ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಕಾಡಾ ಅಧ್ಯಕ್ಷರಾದ ಯುವರಾಜ ಕದಂ, ಮನೋಹರ್ ಬೆಳಗಾಂವ್ಕರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದು, ಯೋಜನೆ ಶೀಘ್ರ ಪೂರ್ಣಗೊಳ್ಳಲೆಂದು ಹಾರೈಸಿದರು.
ಗ್ರಾಮಸ್ಥರು ಈ ಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿ, ಇದರಿಂದ ತಮ್ಮ ದೈನಂದಿನ ಜೀವನದಲ್ಲಿ ಮಹತ್ತರ ಬದಲಾವಣೆ ಉಂಟಾಗಲಿದೆ ಎಂದು ತಿಳಿಸಿದರು.ಈ ಯೋಜನೆ ಗ್ರಾಮಾಭಿವೃದ್ಧಿಗೆ ಮತ್ತೊಂದು ಮೈಲುಗಲ್ಲಾಗಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದ್ದು, ಕಾಮಗಾರಿಯನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 