ಕಾಲ್ವೆಯಲ್ಲಾಪುರ ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
Bhoomi Puja for various development works in Kalveyallapuram village
ಲೋಕದರ್ಶನ ವರದಿ
ಹಾನಗಲ್ 28 :ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಜನತೆಯ ನೆಮ್ಮದಿಯ ಬದುಕಿಗೆ ಅವಶ್ಯ ಮೂಲಸೌಕರ್ಯ ಕಲ್ಪಿಸಲು ಗಮನ ಹರಿಸಲಾಗಿದ್ದು, ಪ್ರತಿಯೊಂದು ಗ್ರಾಮಗಳಲ್ಲಿ ಕನಿಷ್ಟ 20 ಲಕ್ಷ ರೂ.ದಿಂದ ಒಂದು ಕೋಟಿ ರೂ.ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ತಾಲೂಕಿನ ಕಾಲ್ವೆಯಲ್ಲಾಪುರ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಅವರು ಬಾಳಂಬೀಡ ಹಿ ಚನ್ನಾಪುರ ನಡುವಿನ ರಸ್ತೆಯನ್ನು 65 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು, ಸುತ್ತಲಿನ ಹಲವು ಗ್ರಾಮಸ್ಥರಿಗೆ ಅನುಕೂಲವಾಗಿದೆ. ಅನುದಾನ ಲಭ್ಯತೆ ಆಧರಿಸಿ ಈ ಭಾಗದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಮರ್ಕ ಕುಡಿಯುವ ನೀರು ಪೂರೈಕೆಗಾಗಿ ಬಹುಗ್ರಾಮ ನದಿ ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ವಿವರಿಸಿದರು.
ಮುಖಂಡರಾದ ಚಂದ್ರು ಮರೆಕ್ಕನವರ, ಭರತೇಶ ಶೇತಸನದಿ, ಚಂದ್ರಕಾಂತ ಮರೆಕ್ಕನವರ, ಗುಡ್ಡಪ್ಪ ಮಾಸನಕಟ್ಟಿ, ಉಮೇಶ ಕೋಳಿನಿಂಗಣ್ಣನವರ, ಈರಣ್ಣ ಹಿರೂರ, ನಾಗರಾಜ ಹರಿಜನ, ಜಗದೀಶ ಜಾಡರ, ಭೀರಣ್ಣ ಶೇತಸನದಿ ಸೇರಿದಂತೆ ಇನ್ನೂ ಹಲವರು ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 