19 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಭೂಮಿಪೂಜೆ
Bhumi pooja ceremony for the construction of a new building for an Anganwadi center at a cost of Rs.
ಹಾನಗಲ್ 04: ತಾಲೂಕಿನ ದಶರಥಕೊಪ್ಪ ಗ್ರಾಮದಲ್ಲಿ 2024-25 ನೇ ಸಾಲಿನ ಪ್ರಗತಿ ಕಾಲೋನಿ ಯೋಜನೆಯಡಿ ಸಿಸಿ ಚರಂಡಿ ನಿರ್ಮಾಣ ಹಾಗೂ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
15 ಲಕ್ಷ ರೂ. ವೆಚ್ಚದಲ್ಲಿ ಗ್ರಾಮದ ಹನುಮಂತಪ್ಪ ಮರಗಡಿ ಅವರ ಮನೆಯಿಂದ ಸಿದ್ದೇಶ್ವರ ದೇವಸ್ಥಾನದವರೆಗೆ ಹಾಗೂ 10 ಲಕ್ಷ ರೂ. ವೆಚ್ಚದಲ್ಲಿ ಬಸವಣ್ಣೆಪ್ಪ ಅಠ್ಠಣಗಿ ಅವರ ಮನೆಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಸಿಸಿ ಚರಂಡಿ ಮತ್ತು 19 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಈ ಸಂದರ್ಭದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ರಗತಿ ಕಾಲೋನಿ ಯೋಜನೆಯಡಿ ಸಿಸಿ ಚರಂಡಿ, ಸಿಸಿ ರಸ್ತೆ ನಿರ್ಮಿಸಲಾಗುತ್ತಿದೆ. ಅಲೆಮಾರಿ ಜನಾಂಗದ ಬಂಧುಗಳು ವಾಸವಿರುವ ಕಾಲೋನಿಗಳಲ್ಲಿ ಸಹ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳನ್ನು ಸಹ ನಿರ್ಮಿಸಲಾಗುತ್ತಿದೆ ಎಂದು ಶ್ರೀನಿವಾಸ ಮಾನೆ ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿ, ಸ್ಪಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಗ್ರಾಪಂ ಅಧ್ಯಕ್ಷ ಹನುಮಂತಪ್ಪ ಮಾಳಾಪೂರ, ಸದಸ್ಯರಾದ ರಾಮಣ್ಣ ಓಲೇಕಾರ, ಕಮಲವ್ವ ಹುಲ್ಲತ್ತಿ, ಮುಖಂಡರಾದ ಉಮೇಶ ದಾನಪ್ಪನವರ, ಈರಣ್ಣ ಬೈಲವಾಳ, ರಾಜಾಹುಲಿ ಮುಕ್ತೇಶ್ವರ, ಶೇರ್‌ಅಲಿ ಮುಲ್ಲಾ, ಹೆಗ್ಗಪ್ಪ ಕಾಮನಹಳ್ಳಿ, ಮಕ್ಬೂಲ್‌ಅಹ್ಮದ್ ಬಡಗಿ, ಮಂಜುನಾಥಸ್ವಾಮಿ ಹಿರೇಮಠ, ಸುರೇಶ ಹಳೆಬಂಕಾಪೂರ, ಕರಬಸಪ್ಪ ಹರಿಜನ, ಈರ್ಪ ಬ್ಯಾಗವಾದಿ, ಈರ್ಪ ಬಸಾಪೂರ, ಹನುಮಂತಪ್ಪ ಬಸಾಪೂರ, ಅಜ್ಜಪ್ಪ ವಡಗೇರಿ, ಪರಶುರಾಮ ಚಿಕ್ಕಣಗಿ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 