25 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ-ಶ್ರೀನಿವಾಸ ಮಾನೆ
ಹಾನಗಲ್ 14: ತಾಲೂಕಿನ ಕುಂಟನಹೊಸಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ರೂ. 25 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಗ್ರಾಮದಿಂದ ಸಾಂವಸಗಿ ರಸ್ತೆಗೆ ಕೂಡುವ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಮಾನೆ, ತಾಲೂಕಿನಲ್ಲಿ ಹಲವು ವರ್ಷಗಳಿಂದ ಹದಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿರುವ ರಸ್ತೆಗಳನ್ನು ಹಂತ, ಹಂತವಾಗಿ ಕೈಗೆತ್ತಿಕೊಂಡು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದೀಗ 2 ನೇ ಹಂತದಲ್ಲಿ ಮತ್ತೆ ರೂ. 10 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಅಭಿವೃದ್ಧಿಯಾದರೆ ಅಕ್ಕಪಕ್ಕದ ಗ್ರಾಮಗಳಿಗೆ ಶಾಲೆ, ಕಾಲೇಜು ಹಾಗೂ ನಿತ್ಯದ ಕೆಲಸಗಳಿಗೆ ತೆರಳಲು ಅನುಕೂಲವಾಗಲಿದೆ ಎಂದರು.
ಜಿಪಂ ಮಾಜಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಬಸನಗೌಡ ಪಾಟೀಲ, ಗಫಾರಸಾಬ ಹರವಿ, ಪಾಪಾಸಾಬ ಅಂಗಡಿ, ಅಬ್ದುಲಖಾದರ ಮಲ್ಲಿಗಾರ, ಅಜ್ಜನಗೌಡ ಅಡಿವೆಪ್ಪಗೌಡ್ರ, ಗದಿಗೆಪ್ಪ ಪಾಕದ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಇದ್ದರು.