ಅಮ್ಮಿನಭಾವಿ ಮತ್ತು ಹೆಬ್ಬಳ್ಳಿ ಗ್ರಾಮಗಳ ಭೇಟಿ ನೀಡಿ ಕಾಮಗಾರಿಗಳನ್ನು ಪರೀಶೀಲಿಸಿದ ಭುವನೇಶ ಪಾಟೀಲ್
Bhuvanesh Patil visited Amminabhavi and Hebballi villages and inspected the works
ಲೋಕದರ್ಶನ ವರದಿ
ಅಮ್ಮಿನಭಾವಿ ಮತ್ತು ಹೆಬ್ಬಳ್ಳಿ ಗ್ರಾಮಗಳ ಭೇಟಿ ನೀಡಿ ಕಾಮಗಾರಿಗಳನ್ನು ಪರೀಶೀಲಿಸಿದ ಭುವನೇಶ ಪಾಟೀಲ್
ಧಾರವಾಡ ಫೆ.03: ಧಾರವಾಡ ತಾಲ್ಲೂಕಿನ ಅಮ್ಮಿನಭಾವಿ ಮತ್ತು ಹೆಬ್ಬಳ್ಳಿ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಅವರು ಶನಿವಾರ (ಜ.31) ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರೀಶೀಲಿಸಿದರು.
ಅಮ್ಮಿನಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕುಡಿಯುವ ನೀರಿನ ಜಲಜೀವನ್ ಮಿಷನ್ ಕಾಮಗಾರಿ ಕುರಿತು ಮಾಹಿತಿ ಪಡೆದರು. ಡಿಬಿಓಟಿ (ಆಃಓಖಿ) ಕುಡಿಯುವ ನೀರಿನ ಘಟಕದ ಕಾಮಗಾರಿ ಪರೀಶೀಲಿಸಿದರು. ನಂತರ ಅಮ್ಮಿನಭಾವಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿ, ಸಾರ್ವಜನಿಕರ ದಾಖಲಾತಿ ವಹಿ, ಆಸ್ಪತ್ರೆಯ ನೋಂದಣಿ ವಹಿ ಪರೀಶೀಲಿಸಿದರು. ಮತ್ತು ಸಾರ್ವಜನಿಕರಿಗೆ ಸಕಾಲಿಕ ಮತ್ತು ಉಚಿತ ಸೇವೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ನಂತರ ಅವರು ಹೆಬ್ಬಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಮನೆಗಳಿಗೆ ಒದಗಿಸಲಾದ ನೀರಿನ ಕೊಳವೆ ಸಂಪರ್ಕಗಳ ಗುಣಮಟ್ಟ, ನೀರಿನ ಮೀಟರ್‌ಗಳ ಸ್ಥಾಪನೆ, ನೀರು ಸರಬರಾಜಿನ ಸ್ಥಿರತೆ, ಪೈಪ್‌ಲೈನ್ ಕಾಮಗಾರಿಗಳನ್ನು ಖುದ್ದು ಭೇಟಿ ನೀಡಿ, ಪರೀಶೀಲಿಸಿದರು. ನಂತರ ರಸ್ತೆ ಪುನರ್ ಸ್ಥಾಪನೆ ಮತ್ತು ಫೀಲ್ಡ್ ಟೆಸ್ಟ್ ಕಿಟ್‌ಗಳ (ಎಫ್ಟಿಕೆ) ಮೂಲಕ ನೀರಿನ ಗುಣಮಟ್ಟ ಪರೀಕ್ಷೆಯಂತಹ ಅಂಶಗಳನ್ನು ಪರೀಶೀಲಿಸಿ, ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಧಾರವಾಡ ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಂಗಾಧರ ಕಂದಕೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ ಸೇರಿದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗುತ್ತಿಗೆದಾರ ಕಂಪನಿಯ ಪ್ರತಿನಿಧಿಗಳು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 