ಬೀಬಿಆಯಿಷಾಗೆ ರಾಜ್ಯ ಮಟ್ಟದ ಪ್ರತಿಭಾ ಪ್ರಶಸ್ತಿ
Bibi Aisha gets state-level talent award
ಧಾರವಾಡ 18: ತಾಲೂಕಿನ ಅಮ್ಮಿನಬಾವಿ ಗ್ರಾಮದ ಸುಶಿಲಾತಾಯಿ ಅಜ್ಜಯ್ಯ ಹಿರೇಮಠ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 7ನೆಯ ತರಗತಿಯ ವಿದ್ಯಾರ್ಥಿನಿ ಬೀಬಿಆಯಿಷಾ ಮಕ್ತುಂಹುಸೇನ ಪಠಾಣ ಅವಳಿಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕ ಕೊಡಮಾಡುವ 2025ನೆಯ ವರ್ಷದ ‘ರಾಜ್ಯ ಮಟ್ಟದ ಆದರ್ಶ ವಿದ್ಯಾರ್ಥಿನಿ ಪ್ರತಿಭಾ ಪ್ರಶಸ್ತಿ’ ಲಭಿಸಿದೆ.
ಇತ್ತೀಚೆಗೆ ರಾಣೆಬೆನ್ನೂರು ನಗರದ ಮೃತ್ಯುಂಜಯ ಸಭಾಭವನದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಹನುಮಂತಪ್ಪ, ರಾಜ್ಯಾಧ್ಯಕ್ಷ ರಾಜಗೋಪಾಲ್, ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಭೀಮಪ್ಪ ಮಲ್ಲಿಗವಾಡ ಹಾಗೂ ಧಾರವಾಡ ಗ್ರಾಮೀಣ ತಾಲೂಕಾ ಅಧ್ಯಕ್ಷ ಆಂಜನೇಯ ಎಂ. ಇದ್ದರು.
ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಬೀಬಿಆಯಿಷಾಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವದಿಸಿ ಈ ಸಾಧನೆ ನಿರಂತರವಾಗಿರಲಿ ಎಂದು ಸಲಹೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 