ಬಿಗ್ ಬಿ ಮನೆಗೆ ವಾಪಸ್

  ಮುಂಬೈ, ಅ 19 :  ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಯಿಂದ ಮನೆಗೆ ಹಿಂದಿರುಗಿದ್ದಾರೆ. 

   ಯಕೃತ್ ಸಮಸ್ಯೆ ಮತ್ತು ಎಂದಿನ ಆರೋಗ್ಯ ತಪಾಸಣೆಗಾಗಿ ಅವರು ಇಲ್ಲಿನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ವಿವಿಧ ರೀತಿಯ ತಪಾಸಣೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಆದರೆ ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.  

ಈ ನಡುವೆ ಕುಟುಂಬದ ಸದಸ್ಯರು ಅಮಿತಾಭ್ ಆರೋಗ್ಯದ ಬಗ್ಗೆ ಕಳವಳ ಪಡಬೇಕಾಗಿಲ್ಲ. ಎಂದಿನಂತೆ ಅವರು ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರಿಗೆ ವಿವಿಧ ಪರೀಕ್ಷೆಗಳನ್ನು ನಡೆಸಿ ಮನೆಗೆ ಕಳುಹಿಸಲಾಗಿದೆ ಎಂದು ಕುಟುಂಬದ ಸದಸ್ಯರು ಸ್ಪಷ್ಟಪಡಿಸಿದ್ದಾರೆ.