ಬೆಳಗಾವಿ: ಸಕರ್ಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮಕ್ಕಳಿಗೆ ಪಾಠ ಹೇಳಿಕೊಡುವ ಬದಲು ಅವರಿಂದ ಶೌಚಾಲಯ ಹಾಗೂ ತನ್ನ ಬೈಕ್ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬಡಗಿವಾಡ ಗ್ರಾಮದಲ್ಲಿ ನಡೆದಿದೆ.
ಬಡಗಿವಾಡದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲಾ ಮುಖ್ಯೋಪಧ್ಯಾಯ ಜೈಪಾಲ್ ಭಜಂತ್ರಿ ಅವರು ಪಾಠದ ಬದಲು ಬೈಕ್ ಕ್ಲೀನ್, ಬಿಸಿಯೂಟ ಪಾತ್ರೆ ಹಾಗೂ ಶೌಚಾಲಯವನ್ನು ತೊಳೆಯಲು ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದಾರೆ.
ಶಾಲಾ ಮಕ್ಕಳಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ದೃಶ್ಯವನ್ನು ಗ್ರಾಮಸ್ಥರು ವಿಡಿಯೋ ಮಾಡಿದ್ದು, ಶಿಕ್ಷಕನ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿದರ್ೆಶಕ ಅಜಿತ್ ಮನ್ನಿಕೇರ್ ಅವರು, ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಕ್ಷೇತ್ರ ಶಿಕ್ಷಣ ಅಧಿಕಾರಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳಲಾಗುವುದು
ಎಂದಿದ್ದಾರೆ.