ಯುಗಾದಿ ಸಂಭ್ರಮಕ್ಕೆ ಬೈಕ್ ರಾ್ಯಲಿ: ಹಿಂದೂ ಜಾಗರಣ ವೇದಿಕೆ ವತಿಯಿಂದ ಭರ್ಜರಿ ಆಚರಣೆ
Bike rally to celebrate Ugadi: A grand celebration by Hindu Jagran Vedike
ಲೋಕದರ್ಶನ ವರದಿ
ಮುಂಡಗೋಡ 20: ಯುಗಾದಿ ಹಬ್ಬದ ಸಂಭ್ರಮವನ್ನು ಆಚರಿಸುವ ಸಲುವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು ಪಟ್ಟಣದಲ್ಲಿ ಭಕ್ತಿಭಾವ ಹಾಗೂ ಉತ್ಸಾಹದಿಂದ ಬೈಕ್ ರ್ಯಾಲಿ ಆಯೋಜಿಸಲಾಯಿತು. ರ್ಯಾಲಿಯಲ್ಲಿ ಕೇಸರಿ ಧ್ವಜಗಳು, ಧಾರ್ಮಿಕ ಘೋಷಣೆಗಳು ಮತ್ತು ದೇವರ ಭಾವಚಿತ್ರಗಳೊಂದಿಗೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಯಿತು. ರ್ಯಾಲಿಗೆ ಚಾಲನೆ ನೀಡಿದ ಮಾಜಿ ಶಾಸಕ ವಿ. ಎಸ್. ಪಾಟೀಲ್ ಅವರು, ಯುಗಾದಿ ಹಬ್ಬವು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದ್ದು, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಹಾಗೂ ಧಾರ್ಮಿಕ ಚೈತನ್ಯವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು. ಕಾರ್ಯಕ್ರಮದ ಆರಂಭದಲ್ಲಿ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಬೈಕ್ ರ್ಯಾಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಯುವಕರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 