ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು  Bike rider dies in horrific road accident

ಜಮಖಂಡಿ ಜು.31: ತಾಲೂಕಿನ ಆಲಗೂರು ಗ್ರಾಮದ ಗೌಡರ ಗದ್ದೆ ಬಳಿ ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.  

ಮೃತರನ್ನು ಜಮಖಂಡಿ ನಗರದ ನಿವಾಸಿ ನೀತಿನ್ ಮಾದೇವ ಚಮಕೆರಿ (29) ಎಂದು ಗುರುತಿಸಲಾಗಿದೆ. ಅವರು ತೊದಲಬಾಗಿ ಗ್ರಾಮದ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.  

ಶುಕ್ರವಾರ ಬೆಳಗ್ಗೆ ಬ್ಯಾಂಕ್ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ನೀತಿನ್ ಅವರ ಕೈ ಹಾಗೂ ಕಾಲುಗಳು ತುಂಡಾಗಿ ರಸ್ತೆಯ ವಿವಿಧೆಡೆ ಬಿದ್ದಿದ್ದವು.  

ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಜಹೀರ್ ಹುಂಡೇಕರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಘಟನೆ ಕುರಿತು ಮಾಹಿತಿ ತಿಳಿದ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.