ಬೆಂಗಳೂರು, ಫೆ 3 : ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವ್ಯಕ್ತಿಯೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ನಗರದ ಹೊರಮಾವು ಅಗರ ಮುಖ್ಯರಸ್ತೆಯಲ್ಲಿ ರವಿವಾರ ಮಧ್ಯರಾತ್ರಿ ಸಂಭವಿಸಿದೆ.
ವಡ್ಡರಪಾಳ್ಯದ 39 ವರ್ಷದ ಸುದೀಪ್ ನಾಯ್ಡು ಮೃತಪಟ್ಟ ಬೈಕ್ ಸವಾರ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುದೀಪ್ ಅವರು ರಾತ್ರಿ 12.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ಸಾಗುತ್ತಿದ್ದಾಗ ಮಾರ್ಗಮಧ್ಯ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.