ನವದೆಹಲಿ, ಫೆ 13, ದೆಹಲಿಯಲ್ಲಿ ಗುರುವಾರ ಎರಡು ದಿನಗಳ ಕಾಲ ನಡೆಯಲಿರುವ ಮಾದಕ ದ್ರವ್ಯ ಕಳ್ಳಸಾಗಣೆಗೆ ಕಡಿವಾಣ ಹಾಕುವ ಉದ್ದೇಶದ ಬಿಮ್‌ಸ್ಟೆಕ್ ಪಾಲುದಾರ ರಾಷ್ಟ್ರಗಳ ಸಮಾವೇಶವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಲಿದ್ದಾರೆ.ಮಾದಕ ದ್ರವ್ಯ ನಿಯಂತ್ರಣ ಸಂಸ್ಥೆ ಈ ಸಮಾವೇಶ ಆಯೋಜಿಸಿದ್ದು ಮಾದಕ ದ್ರವ್ಯ ಕಳ್ಳಸಾಗಣೆಯಿಂದ ಎದುರಾಗಿರುವ ಬೆದರಿಕೆಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಬಿಮ್‌ಸ್ಟೆಕ್ ಸದಸ್ಯ ರಾಷ್ಟ್ರಗಳಿಗೆ ಈ ಸಮಾವೇಶ ವೇದಿಕೆಯಾಗಲಿದೆ ಎಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.
ಬಿಮ್‌ಸ್ಟೆಕ್ - ತಾಂತ್ರಿಕ ಮತ್ತು ಆರ್ಥಿಕ ಸಹಕಾರಿಕ್ಕಾಗಿನ ಬಹು ವಲಯದ ಬಂಗಾಳಕೊಲ್ಲಿ ಉಪಕ್ರಮ - ಬೇ ಆಫ್ ಬೆಂಗಾಳ್ ಇನಿಷಿಯೇಟಿವ್ ಫಾರ್ ಮಲ್ಟಿ ಸೆಕ್ಟರಲ್ ಟೆಕ್ನಿಕಲ್ ಅಂಡ್ ಎಕನಾಮಿಕ್ ಕೋಆಪರೇಷನ್. ಬಂಗಾಳ ಕೊಲ್ಲಿಗೆ ಹೊಂದಿಕೊಂಡಂತಿರುವ ರಾಷ್ಟ್ರಗಳಾದ ಭಾರತ, ಬಾಂಗ್ಲಾದೇಶ, ಭೂತಾನ್, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥಾಯ್ಲೆಂಡ್ ಇದರ ಸದಸ್ಯ ದೇಶಗಳಾಗಿವೆ.