ಜೈವಿಕ-ವೈದ್ಯಕೀಯ ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿರಲಿ: ಜಿಲ್ಲಾಧಿಕಾರಿ
ಲೋಕದರ್ಶನ ವರದಿ
ಬಾಗಲಕೋಟೆ: ಜಿಲ್ಲೆಯಲ್ಲಿರುವ ಜೈವಿಕ ಮತ್ತು ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಹಾಗೂ ಕಾನೂನಾತ್ಮವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜೈವಿಕ-ವೈದ್ಯಕೀಯ ತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಾನವ ಹಾಗೂ ಪ್ರಾಣಿಗಳ ರೋಗನಿರ್ಣಯ ಚಿಕಿತ್ಸೆ ಅಥವಾ ಪ್ರತಿರಕ್ಷಣೆ ಸಮಯದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಜಿಲ್ಲಾ ತ್ಯಾಜ್ಯ ವಿಲೇವಾರಿ ಘಟಕಕ್ಕೆ ತರುವ ಜವಾಬ್ದಾರಿ ಗ್ರಾಮ ಮತ್ತು ನಗರ ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ ಎಂದರು.
ವೈದ್ಯಕೀಯ ತ್ಯಾಜ ಮುಖ್ಯವಾಗಿ ಹಾಸ್ಪಿಟಲ್, ನಸರ್ಿಂಗ್ ಹೋಮ್, ಕ್ಲಿನಿಕ್, ವೆಟರ್ನರಿ ಇಸ್ಟಿಟ್ಯೂಟ್ ಅಥವಾ ಎನಿಮಲ್ ಹೌಸ್, ಬ್ಲಡ್ ಬ್ಯಾಂಕ್, ಬ್ಲಡ್ ಡೊನೇಷನ್ ಕ್ಯಾಂಪ್, ಆಯುಷ ಹಾಸ್ಪಿಟಲ್, ಹೆಲ್ತ ಕ್ಯಾಂಪ್, ಮೆಡಿಕಲ್ ಅಥವಾ ಸಜರ್ಿಕಲ್ ಕ್ಯಾಂಪ್ ಪಸ್ಟ್ ಏಡ್ ರೂಮ್ಸ್ ಆಂಡ್ ಸ್ಕೂಲ್ಗಳಿಂದ ಬರುತ್ತಿದ್ದು, ಬಾಗಲಕೋಟೆಯಲ್ಲಿ ನಿಮರ್ಿಸಲಾದ ವೈದ್ಯಕೀಯ ತ್ಯಾಜ್ಯ ಘಟಕದಲ್ಲಿ ವಿಲೇವಾರಿಯಾಗಬೇಕು ಎಂದರು.
ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನಿರ್ವಹಣೆ ಮಾಡಬೇಕು ಇಲ್ಲವಾದಲ್ಲಿ ಬೇರೆ ರೋಗಿಗಳಿಗೆ ಇನ್ಪೆಕ್ಷನ್ ಆಗುವ ಸಾದ್ಯತೆ ಇರುತ್ತದೆ.
ಅಲ್ಲದೇ ದ್ರವ ಮತ್ತು ಘನ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವಿಲೇವಾರಿ ಮಾಡಬೇಕು. ಇದಕ್ಕಾಗಿಯೇ 2016 ಮಾರ್ಚ 28 ರಂದು ಬಯೋ ಮೆಡಿಕಲ್ ತ್ಯಾಜ್ಯ ನಿರ್ವಹಣಾ ನಿಯಮಗಳು ಜಾರಿಗೆ ಬಂದಿದ್ದು, ಜೈವಿಕ, ವೈದ್ಯಕೀಯ ತ್ಯಾಜ್ಯವನ್ನು ಪ್ರತ್ಯೇಕಿಸಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡುವುದು, ತ್ಯಾಜ್ಯ ಉತ್ಪಾದನೆಯನ್ನು ಕಡಿಮೆಗೊಳಿಸಿ ಪರಿಸರದ ಮೇಲೆ ಪರಿಣಾಮ ಬೀರುವದನ್ನು ಕಡಿಮೆಗೊಳಿಸುವುದಾಗಿದೆ ಎಂದು ತಿಳಿಸಿದರು.
ತ್ಯಾಜ್ಯ ವಿಲೇವಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ನಗರಸಭೆಯವರು ಸಂಗ್ರಹಿಸುವ ತ್ಯಾಜ್ಯ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಕೂಡಿಸುವಂತಿಲ್ಲವೆಂದರು.
ಪ್ರತ್ಯೇಕವಾಗಿ ವಿಲೇವಾರಿಯಾಗಬೇಕು. ವೈದ್ಯಕೀಯ ತ್ಯಾಜ್ಯವನ್ನು ಸಂಗ್ರಹಿಸುವ ವಾಹನಗಳ ಮೇಲೆ ಮಾಹಿತಿ ಇರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಪಟ್ಟಣಶೆಟ್ಟಿ, ಆರ್ಸೆಟ್ ಸಂಸ್ಥೆಯ ಆಡಳಿತಾಧಿಕಾರಿ ಪಂಚಮುಖಿ, ಡಾ.ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 