ಜನನ ಮರಣ ಮಾಹಿತಿ ನಿಖರವಾಗಿರಲಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
Birth and death data should be accurate: Additional DC Sidrameshwar
ಕೊಪ್ಪಳ 09: ಜನನ ಮರಣ ಮಾಹಿತಿಯು ನಿಖರವಾಗಿ ಸಂಗ್ರಹಿಸುವುದರಜೊತೆಗೆಇದನ್ನುತಂತ್ರಾಶದಲ್ಲಿ ನೋಂದಣಿಯಾಗುವಂತೆ ನೋಡಿಕೊಳ್ಳಬೇಕು ಎಂದು ಅಪರಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಅವರು ಬುಧವಾರಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಕರೆದಜನನ ಮರಣ ನೋಂದಣಿಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ನಾಗರಿಕ ನೋಂದಣಿ ಪದ್ಧತಿಯಡಿಜನನ ಮರಣ ಹಾಗೂ ನೀರ್ಜೀವ ಜನನಗಳನ್ನು“ಜನನ ಮರಣ ನೋಂದಣಿ ಅಧಿನಿಯಮಗಳು-1969”ಹಾಗೂ"ಕರ್ನಾಟಕಜನನ ಮರಣ ನೋಂದಣಿ ನಿಯಮಗಳು 1999" ರನ್ವಯಕಡ್ಡಾಯವಾಗಿ ನೋಂದಣಿ ಮಾಡಬೇಕಾಗಿರುತ್ತದೆ.ಜನನ-ಮರಣ ನೋಂದಣಿಯನ್ನುಅಧಿನಿಯಮ ಮತ್ತು ನಿಯಮಗಳಂತೆ ಅನುಷ್ಠಾನಕ್ಕೆ ಕ್ರಮವಹಿಸುವುದರ ಜೊತೆಗೆ ಶೇ.100 ರಷ್ಟುಜನನ, ಮರಣ ಮತ್ತು ನೀರ್ಜೀವ ಜನನಗಳ ಘಟನೆಗಳನ್ನು ನೋಂದಾವಣೆ ಆಗಿರುವ ಬಗ್ಗೆ ಪರೀಶೀಲನೆ ಕೈಗೊಳ್ಳಬೇಕು ಎಂದರು.
ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರತುಂಬಾ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಯಾಗಿದ್ದು, ಈ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು.ಜನನ ಮತ್ತು ಮರಣ ನೋಂದಣಿಕಾರ್ಯವನ್ನು ಜಿಲ್ಲೆಯ ಎಲ್ಲ ಗ್ರಾಮ ಲೆಕ್ಕಿಗರು, ವೈದ್ಯಾಧಿಕಾರಿಗಳು ಹಾಗೂ ನಗರಸಭೆ ಪೌರಾಯುಕ್ತರು, ಈ ಕಾರ್ಯವನ್ನು ಸರಿಯಾಗಿ ನಿರ್ವಹಿಸಬೇಕು. ನೋಂದಣಿ ವೇಳೆ ಸೂಕ್ತ ಪರೀಶೀಲನೆ ಕೈಗೊಂಡು ಅದರ ವದಿಯನ್ನು ಸಲ್ಲಿಸಬೇಕು. ವಿಳಂಬ ನೋಂದಣಿ ಘಟನೆಗಳನ್ನು ತಡೆಯಬೇಕು. ಯಾವುದೇ ದಾಖಲಾತಿ ಬಾಕಿ ಉಳಿಯದಂತೆ ಶೇ.100ರಷ್ಟು ನೋಂದಣಿಯಾಗುವಂತೆ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುಧಾಕರ ಮಾನೆ ಅವರು ಮಾತನಾಡಿ, ಜನನ, ಮರಣ ಮತ್ತು ನೀರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿರುತ್ತದೆ.21 ದಿವಸಗಳೊಳಗಾಗಿ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿಯನ್ನು ಮಾಡಲಾಗುವುದು. 2024ರ ತಿದ್ದುಪಡಿ ನಿಯಮದಂತೆ ಜನನ ಮರಣ ಹೆಚ್ಚುವರಿ ಪ್ರಮಾಣ ಪತ್ರಗಳ ಶುಲ್ಕವು ಈಗ ರೂ.50 ಆಗಿರುತ್ತದೆ. ವಿಳಂಬ (ತಡ) ನೋಂದಣಿಗೆ ಘಟನೆ ಸಂಭವಿಸಿದ 21 ದಿನಗಳಿಂದ 30 ದಿನದವರೆಗೆ ಶುಲ್ಕ 20ಆಗಿರುತ್ತದೆ. ಘಟನೆ ಸಂಭವಿಸಿದ 30 ದಿನಗಳ ನಂತರ ಒಂದು ವರ್ಷದವರೆಗೆ ಶುಲ್ಕ ರೂ.50 ಆಗಿರುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ 731 ನೋಂದಣಿ ಘಟಕಗಳಿವೆ ಎಂದು ಹೇಳಿದರು. ಜನನ ಮರಣ ಘಟನೆಗಳನ್ನು ಇ-ಜನ್ಮತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯ 2015 ರಿಂದ ಪ್ರಾರಂಭಿಸಲಾಗಿದೆ. ತದ ನಂತರ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 2018 ರಿಂದ ಸಂಪೂರ್ಣವಾಗಿ ಇ-ಜನ್ಮತಂತ್ರಾಂಶದ ಮೂಲಕ ಜನನ ಮರಣ ಘಟನೆಗಳನ್ನು ನೋಂದಣಿ ಮಾಡುವ ಕಾರ್ಯವನ್ನು ಕೊಪ್ಪಳ ಜಿಲ್ಲೆಯಾದ್ಯಂತ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ನೋಂದಣಾಧಿಕಾರಿಗಳು ಅಥವಾ ಉಪ ನೋಂದಣಾಧಿಕಾರಿಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯೊಂದಿಗೆ ಪ್ರಮಾಣ ಪತ್ರಗಳ ವಿತರಣೆ ಮಾಡಬೇಕು. ಜನನ ಮರಣ ನೋಂದಣಿ ಘಟಕಗಳ ಪರೀಶೀಲನೆ ಸೆಕ್ಷನ್ 18ರ ಪ್ರಕಾರಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇಕಡಾ 100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಪರೀಶೀಲನೆಯನ್ನುಕಂದಾಯ, ನಗರಾಭಿವೃದ್ಧಿ ಅಥವಾ ಸಾಂಖ್ಯಿಕಇಲಾಖೆಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು.
ಸಭೆಯಲ್ಲಿಸಣ್ಣ ನೀರಾವರಿ ಇಲಾಖೆ ಇಇ ಬಸವರಾಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ ಶೆಟ್ಟಪ್ಪನವರ್, ಸಹಾಯಕಸಾಂಖ್ಯಿಕ ಅಧಿಕಾರಿಗಳಾದ ಕಾಮಾಕ್ಷೀ ಹಾಗೂ ಪ್ರವೀಣ,ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಛೇರಿಯ ಸಮಾಲೋಚಕ ದತ್ತು ಪ್ರಸಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 