ಕಾರಂಜಿಮಠದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ
Birth anniversary of Vishwaguru Basavanna celebrated at Karanji Math
ಬೆಳಗಾವಿ 01 : ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 299ನೇ ಶಿವಾನುಭವ ಹಾಗೂ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮವು ಸೋಮವಾರ ದಿನಾಂಕ 4 ಮೇ 2026 ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಹಿರಿಯ ವೈದ್ಯರೂ ವಿಶ್ರಾಂತ ಪ್ರಾಚಾರ್ಯರೂ ಆದ ಡಾ. ಎಚ್. ಬಿ. ರಾಜಶೇಖರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜೆ.ಎನ್.ಮೆಡಿಕಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಅವಿನಾಶ್ ಕವಿ ಅವರು ಆಗಮಿಸಿ "ವಿಶ್ವಗುರು ಬಸವಣ್ಣನವರ ಬಹುಮುಖ ವ್ಯಕ್ತಿತ್ವ" ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 