ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸುರೇಂದ್ರ ದಾನಿ ಅವರ ಜನ್ಮ ಶತಮಾನೋತ್ಸವ
Birth centenary of Tissar Award-winning journalist Surendra Dani
ಹುಬ್ಬಳ್ಳಿ 30: ಟಿಯೆಸ್ಸಾರ್ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಸುರೇಂದ್ರ ದಾನಿ ಅವರ ಜನ್ಮ ಶತಮಾನೋತ್ಸವ (1925-2025) ನಿಮಿತ್ ಸುರೇಂದ್ರ ದಾನಿ ಜನ್ಮ ಶತಮಾನೋತ್ಸವ ಸಮಿತಿಯವರು ಆಯೋಜಿಸಿದ್ದ ಸಮಾರಂಭದಲ್ಲಿ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿ ಅಮೋಘ ಸೇವೆ ಸಲ್ಲಿಸಿದ್ದ, ಶ್ರೇಷ್ಠ ಪತ್ರಕರ್ತರಾಗಿದ್ದ, ಮೃದು ಭಾಷೆಯ, ಸೌಮ್ಯ ಸ್ವಭಾವ ಹೊಂದಿದ್ದ, ಪತ್ರಿಕಾ ವೃತಿಗೆ ಮೌಲ್ಯ ತಂದು ಕೊಟ್ಟಂತಹ ಪರಮಪೂಜ್ಯರಾದ ಸುರೇಂದ್ರ ಭೀಮರಾವ್ ದಾನಿ ಅವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ, ಪುಷ್ಾರೆ್ಪಣ ಮಾಡುವ ಮೂಲಕ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು.
ಹಿರಿಯರು, ಸರಳ ಸಜ್ಜನ ರಾಜಕಾರಣಿ ಲಿಂಗರಾಜ ಪಾಟೀಲ, ಹಿರಿಯರು, ಪತ್ರಕರ್ತ ಅರುಣಕುಮಾರ ಹಬ್ಬು, ವಾಣಿಜ್ಯ ತೇರಿಗೆ ಇಲಾಖೆ ಅಧಿಕಾರಿ ಆರ್.ಎಮ್.ಗೋಗೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಡಾ. ಬಸವಕುಮಾರ ತಲವಾಯಿ, ಅಂಬರೀಶ್ ಹಾನಗಲ್, ಸುಜ್ಞಾನ ದಾನಿ, ಅರುಣ ದಾನಿ, ಅಶೋಕ ದಾನಿ, ಗೀರೀಶ ಪಟ್ಟಣಶೆಟ್ಟಿ, ಅಮೃತ್, ಮುಂತಾದವರು ಇದ್ದರು. ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಸುರೇಂದ್ರ ದಾನಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದನ್ನು ನೆನಪಿಸಿದ್ದಾರೆ. ತಮ್ಮ ತಂದೆಯವರು ಹಾಗೂ ಸುರೇಂದ್ರ ದಾನಿಯವರು ಬಹಳ ಪರಿಚಯ ಹೊಂದಿದ್ದರು ಎಂದು ಸ್ಮರಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 