ನದಾಫ್ ಸಂಘದ ಸಂಸ್ಥಾಪಕರ ಜನ್ಮದಿನ ಆಚರಣೆ
Birthday celebration of the founder of Nadaf Association
ಲೋಕದರ್ಶನ ವರದಿ
ಮುದ್ದೇಬಿಹಾಳ 12: ಪಟ್ಟಣದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ವತಿಯಿಂದ ವಿದ್ಯಾನಿಕೇತನ ಶಾಲೆಯಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಪಿಂಜಾರ ರತ್ನ ದಿ. ಹಾಜಿ ಹೆಚ್. ಇಬ್ರಾಹಿಂ ಸಾಹೇಬರ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಕ ಟಿ.ಎನ್. ರೂಡಗಿ, ಸಮಾಜವನ್ನು ಒಗ್ಗೂಡಿಸಿ ಸಂಘಟನೆಯ ಬಲವರ್ಧನೆಗೆ ಶ್ರಮಿಸಿದ ಹಾಜಿ ಇಬ್ರಾಹಿಂ ಸಾಹೇಬರು ಪ್ರವರ್ಗ-1 ಮೀಸಲಾತಿ ಸೌಲಭ್ಯ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು.ಸಂಘದ ತಾಲೂಕು ಘಟಕದ ಅಧ್ಯಕ್ಷ ಮಲಿಕಸಾಬ ನದಾಫ್, ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ, ಉಪಾಧ್ಯಕ್ಷರಾದ ಮಕ್ತುಮಸಾಬ ನದಾಫ್, ಮೌಲಾಸಾಬ ನದಾಫ್, ಲಾಡ್ಲೇಮಶಾಕ್ ನದಾಫ್, ಟಿ.ಎನ್. ರೂಡಗಿ, ಎನ್.ಬಿ. ಪಿಂಜಾರ, ದಾವಲಸಾಬ ವಾಲಿಕಾರ, ಹಸನಸಾಬ ಕವಡಿಮಟ್ಟಿ, ಬಾಬು ತಮದಡ್ಡಿ, ರಜಾಕ್ ಭೈರವಾಡಗಿ, ಹೆಚ್.ಐ. ಢವಳಗಿ, ಲಾಳೆಸಾಬ ದಿಡ್ಡಿಮನಿ ಹಾಗೂ ಅಬ್ದುಲ್ ರಜಾಕ್ ಮುದ್ನಾಳ ಉಪಸ್ಥಿತರಿದ್ದರು.ಸಂಘದ ಪ್ರಧಾನ ಕಾರ್ಯದರ್ಶಿ ಬಾಬು ದಿಡ್ಡಿಮನಿ ಸ್ವಾಗತಿಸಿ, ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 