ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಜನ್ಮದಿನದ ಶುಭಾಶಯಗಳ ಮಹಾಪೂರ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಜನ್ಮದಿನದ ಶುಭಾಶಯಗಳ ಮಹಾಪೂರ Birthday wishes is pouring in for Minister Lakshmi Hebbalkar

ಬೆಳಗಾವಿ 14: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜನ್ಮದಿನದ ಅಂಗವಾಗಿ ಶನಿವಾರ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಹುಟ್ಟುಹಬ್ಬದ ಪ್ರಯುಕ್ತ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ನೇಹಿತರು ಹಾಗೂ ಅಪಾರ ಅಭಿಮಾನಿಗಳು ಬೆಳಗ್ಗೆಯಿಂದಲೇ ಸಚಿವರ ಮನೆಗೆ ಆಗಮಿಸಿ ಹೂಗುಚ್ಛ, ಕಾಣಿಕೆಗಳನ್ನು ನೀಡಿ ಶುಭ ಕೋರಿದರು.  

ಅಭಿಮಾನಿಗಳು ತಂದಿದ್ದ ಕೇಕ್ ಕತ್ತರಿಸಿ ಸಚಿವರು ಸಂಭ್ರಮಿಸಿದರು.  ಸಾಮಾಜಿಕ ಜಾಲತಾಣಗಳ ಮೂಲಕವೂ ಅಭಿಮಾನಿಗಳು ದೊಡ್ಡ ಪ್ರಮಾಣದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ.  ಹೆಬ್ಬಾಳಕರ್ ಅವರು ಜನಸೇವೆಯ ಮೂಲಕ ಜನಮನ ಗೆದ್ದ ನಾಯಕಿಯಾಗಿ ಗುರುತಿಸಿಕೊಂಡಿದ್ದು, ಅವರ ಜನ್ಮದಿನವನ್ನು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.   

ಈ ಸಂದರ್ಭದಲ್ಲಿ ಹಲವರು ಅವರ ಸಾರ್ವಜನಿಕ ಸೇವಾ ಕಾರ್ಯವನ್ನು ಶ್ಲಾಘಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರುವಂತೆ ಅಭಿಮಾನಿಗಳು ಹಾರೈಸಿದರು. ಸಚಿವೆ ಹೆಬ್ಬಾಳಕರ್ ಅವರು ಶುಭಾಶಯ ಕೋರಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. 


Belgavi