ಪತ್ರಕರ್ತ ಸಾದಿಕ್ ಅಲಿ ಅವರಿಗೆ 64ನೇ ಜನ್ಮದಿನದ ಶುಭಾಶಯ
Birthday wishes to journalist Sadiq Ali on his 64th birthday
ಕೊಪ್ಪಳ 21: ಜಿಲ್ಲೆಯ ಹಿರಿಯ ಪತ್ರಕರ್ತ ಸಾದಿಕ್ ಅಲಿ ಅವರ 64ನೇ ಜನ್ಮದಿನದ ಅಂಗವಾಗಿ ಅವರ ಪತ್ರಿಕೋದ್ಯಮ ಸೇವೆ ಹಾಗೂ ಸಾಮಾಜಿಕ ಕಾಳಜಿಯನ್ನು ಸ್ಮರಿಸಿ ಶುಭಾಶಯ ಕೋರಲಾಗಿದೆ.
ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಸಾದಿಕ್ ಅಲಿ ಅವರು ಸತ್ಯ, ನಿಷ್ಠೆ ಮತ್ತು ಸಾಮಾಜಿಕ ಕಾಳಜಿಯನ್ನು ತಮ್ಮ ವೃತ್ತಿಯ ಪ್ರಮುಖ ಮೌಲ್ಯಗಳನ್ನಾಗಿ ಮಾಡಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗಗಳ ಸಮಸ್ಯೆಗಳು, ಜನರ ಮೂಲಭೂತ ಅಗತ್ಯಗಳು, ಶಿಕ್ಷಣ, ಆರೋಗ್ಯ, ರಸ್ತೆ ಹಾಗೂ ಕುಡಿಯುವ ನೀರು ಸೇರಿದಂತೆ ಹಲವು ಸಾಮಾಜಿಕ ವಿಚಾರಗಳಿಗೆ ತಮ್ಮ ವರದಿಗಳ ಮೂಲಕ ಬೆಳಕು ಚೆಲ್ಲಿದ್ದಾರೆ.
ಸಾಮಾನ್ಯ ಜನರ ಧ್ವನಿಯನ್ನು ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಪತ್ರಿಕೋದ್ಯಮದ ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿರುವ ಅವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮೂರು ಬಾರಿ, ಜಿಲ್ಲಾಧ್ಯಕ್ಷರಾಗಿ ಎರಡು ಬಾರಿ ಹಾಗೂ ರಾಜ್ಯ ಸಮಿತಿಯ ಕಾರ್ಯಕಾರಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದ ಸೇವೆಗಾಗಿ ಡಿ.ವಿ. ಗುಂಡಪ್ಪ ಸ್ಮಾರಕ ಪ್ರಶಸ್ತಿ, ಕರ್ನಾಟಕ ಸರ್ಕಾರದ ಮಾಧ್ಯಮ ಅಕಾಡೆಮಿ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಅವರು ಪಾತ್ರರಾಗಿದ್ದಾರೆ. ಲೋಕದರ್ಶನ ಪ್ರಾದೇಶಿಕ ಕನ್ನಡ ದಿನಪತ್ರಿಕೆಯಲ್ಲಿ ಸುಮಾರು 25 ವರ್ಷಗಳ ಕಾಲ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿರುವ ಅವರು, ಕನ್ನಡ, ಹಿಂದಿ, ಉರ್ದು ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಬರಹಗಳ ಮೂಲಕವೂ ಸಾಮಾಜಿಕ ಸೇವೆ ಮುಂದುವರಿಸಿದ್ದಾರೆ.
ಅವರ 64ನೇ ಜನ್ಮದಿನದ ಸಂದರ್ಭದಲ್ಲಿ ಸಾದಿಕ್ ಅಲಿ ಅವರ ಬದುಕು ಮತ್ತು ಪತ್ರಿಕೋದ್ಯಮ ಕುರಿತು ಕೃತಿ ಪ್ರಕಟಿಸಿ ಲೋಕರೆ್ಣ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಿರಿಯ ಪತ್ರಕರ್ತರ ಅನುಭವ ಮತ್ತು ನಿಷ್ಠೆ ಯುವ ಪತ್ರಕರ್ತರಿಗೆ ಮಾರ್ಗದರ್ಶನವಾಗಲಿ, ಅವರ ಸಾಮಾಜಿಕ ಸೇವೆ ಹಾಗೂ ಪತ್ರಿಕೋದ್ಯಮದ ಪಯಣ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 