ಏತನೀರಾವರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬ್ಲಾಕ್ ಅಧ್ಯಕ್ಷ ಶ್ರೀನಿವಾಸರಾವ್
Block President Srinivasa Rao laid the foundation stone for the irrigation project
ಲೋಕದರ್ಶನ ವರದಿ
ಕಂಪ್ಲಿ 20: ಏತನೀರಾವರಿ ಯೋಜನೆಯಿಂದ ಗ್ರಾಮೀಣ ಭಾಗದ ರೈತರ ಜಮೀನುಗಳಿಗೆ ನೀರಿನ ಅನುಕೂಲವಾಗುವ ಜೊತೆಗೆ ಉತ್ತಮ ಬದುಕಿಗೆ ದಾರಿಯಾಗುತ್ತದೆ ಎಂದು ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಅಭಿಪ್ರಾಯ ಪಟ್ಟರು.
ತಾಲೂಕಿನ ಹಂಪಾದೇವನಹಳ್ಳಿ ಗ್ರಾಮದಲ್ಲಿ ಏತನೀರಾವರಿ ಯೋಜನೆ ಕಾಮಗಾರಿಗೆ ಶನಿವಾರ ಅಡಿಗಲ್ಲು ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಹೊನ್ನಳ್ಳಿ, ಹಂಪಾದೇವನಹಳ್ಳಿ ಭಾಗದಲ್ಲಿರುವ ಎಸ್ಸಿ, ಎಸ್ಟಿ ರೈತರ ಜಮೀನುಗಳಿಗೆ ನೀರು ಒದಗಿಸುವ ಹಿತದೃಷ್ಠಿಯಿಂದ ಏತನೀರಾವರಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗಿದೆ. ಇದರಿಂದ ಈ ಭಾಗದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ. ಇದರ ಸದುಯೋಗದೊಂದಿಗೆ ಉತ್ತಮ ಬೆಳೆಗಳನ್ನು ಬೆಳೆಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಸಣ್ಣ ನೀರಾವರಿ ಇಲಾಖೆಯ ಎಇ ವಿಜಯಕುಮಾರ ಮಾತನಾಡಿ, ಏತನೀರಾವರಿ ಮೂಲಕ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ರೈತರ ಜಮೀನುಗಳಿಗೆ ಸಮರ್ಕವಾಗಿ ನೀರು ಒದಗಿಸಲಾಗುತ್ತದೆ. ಹೊನ್ನಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ರೈತರ 55 ಎಕರೆ ಜಮೀನುಗಳಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಸುಮಾರು 55 ಲಕ್ಷ ವೆಚ್ಚದ ಏತನೀರಾವರಿ ಕಾಮಗಾರಿಗೆ ಚಾಲನೆ ಸಿಕ್ಕಿದೆ.
ಮತ್ತು ಹಂಪಾದೇವನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ರೈತರ 20 ಎಕರೆ ಜಮೀನುಗಳಿಗೆ ಸುಮಾರು 12 ಲಕ್ಷ ವೆಚ್ಚದಲ್ಲಿ ಮತ್ತು ಪರಿಶಿಷ್ಟ ಜಾತಿಯ ರೈತರ 15 ಎಕರೆ ಜಮೀನುಗಳಿಗೆ ಸುಮಾರು 27 ಲಕ್ಷ ವೆಚ್ಚದ ಏತನೀರಾವರಿ ಯೋಜನೆಯಾಗಿದೆ. ಒಟ್ಟಾರೆಯಾಗಿ ಟಿಸಿಪಿ, ಟಿಎಸ್‌ಪಿ ಯೋಜನೆಯಡಿ ಸುಮಾರು 94 ಲಕ್ಷ ವೆಚ್ಚದ ಏತನೀರಾವರಿ ಮಾಡಲಾಗುತ್ತಿದೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 