ರಾಣೇಬೆನ್ನೂರು 10: ರೈತರ ಹೊಲಗಳಿಗೆ ತೆರಳುವ ರಸ್ತೆಗೆ ವ್ಯಕ್ತಿಯೊಬ್ಬ ತಡೆಯೊಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯನ್ನು ಬಂದ್ ಮಾಡಿದ ಘಟನೆ ತಾಲೂಕಿನ ಗುಡ್ಡದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 200- 300 ಎಕರೆ ಜಮೀನಿನಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗ್ರಾಮದ ವ್ಯಕ್ತಿಯೊಬ್ಬ ತಮಗೆ ಸೇರಿದ್ದು ಎಂದು ಅದಕ್ಕೆ ಒಡ್ಡು ಕಟ್ಟಿ ಬಂದ್ ಮಾಡಿದ್ದ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಜೋಯಿಸರಹರಳಹಳ್ಳಿ- ಸುಣಕಲ್ಲ ಬಿದರಿ ರಸ್ತೆಯನ್ನು ಬಂದ್ ಮಾಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಬಂದು ಸಮಸ್ಯೆ ಇತ್ಯರ್ಥ ಮಾಡಬೇಕು. ಆ ಜಮೀನಿಗಳಿಗೆ ತೆರಳಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ನಮಗೆ ಹೊಸ ರಸ್ತೆಯನ್ನು ಹುಡುಕಿ ಕೊಡುವವರೆಗೂ ರಸ್ತೆ ತೆರವುಗೊಳಿಸುವುದಿಲ್ಲ ಎಂದರು.ಬಾಕ್ಸ್ತಾಲೂಕಿನ ಗುಡ್ಡದ ಹೊಸಳ್ಳಿ ಗ್ರಾಮದಲ್ಲಿ ಹೊಲಗಳಿಗೆ ಸಂಪರ್ಕ ಕಲ್ಪಿಸುವ ಜಾಗೆಯು ಖಾಸಗಿ ವ್ಯಕ್ತಿಗೆ ಸೇರಿದ್ದಾಗಿದೆ. ನಕ್ಷೆಯಲ್ಲಿ ಆ ಭಾಗದಲ್ಲಿ ರಸ್ತೆ ಇರುವುದಿಲ್ಲ.ಈ ಕುರಿತು ಈಗಾಗಲೇ ರೆವಿನ್ಯೂ ಅಧಿಕಾರಿ ಹಾಗೂ ಸರ್ವೆ ಅಧಿಕಾರಿಗಳಿಗೆ ಸ್ಥಳಕ್ಕೆ ಕಳುಹಿಸಿ ಸಮಸ್ಯೆ ಇತ್ಯರ್ಥಕ್ಕೆ ಸಭೆ ನಡೆಸಲು ತಿಳಿಸಲಾಗಿದೆ. ಒಂದು ವೇಳೆ ಗ್ರಾಮಸ್ಥರು ರಸ್ತೆ ಬೇಕಾದರೆ ಕೋರ್ಟ್‌ಗೆ ಹೋಗಿ ರಸ್ತೆ ಮಾಡಿಸಿಕೊಂಡು ಬರಬೇಕು ಎಂದು ತಾಲೂಕ ದಂಡಾಧಿಕಾರಿ ತಿಳಿಸಿದ್ದಾರೆ.