ದಾನಗಳಲ್ಲಿ ರಕ್ತದಾನ ಶ್ರೇಷ್ಠ: ಡಾ. ನದಾಫ
ಲೋಕದರ್ಶ ವರದಿ
ಕಕ್ಕೇರಿ 26: ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ ಆಗುವುದರ ಜೊತೆಗೆ ಶರೀರದಲ್ಲಿ ಚೈತನ್ಯ ವೃದ್ಧಿಯಾಗಿ ವ್ಯಕ್ತಿಯ ಕಾರ್ಯ ಚಟುವಟಿಕೆಗಳು ಚುರುಕಾಗುತ್ತವೆ ಹಾಗೂ ಜ್ಞಾಪಕ ಶಕ್ತಿ ಕೂಡ ಹೆಚ್ಚುತ್ತದೆ, ಹೃದಯಾಘಾತ ತಡೆಯಲು ಸಹಾಯವಾಗುತ್ತದೆ.
ಪುರುಷರು ಮೂರು ತಿಂಗಳಿಗೊಮ್ಮೆ ಮತ್ತು ಸ್ತ್ರೀಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಲೀಮಾ ನದಾಫ ಹೇಳಿದರು.
ಖಾನಾಪುರ ತಾಲೂಕಿನ ಇಟಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತ ದಾನ ಶಿಬಿರದಲ್ಲಿ ಮಾತನಾಡುವ ಸಂದರ್ಭದಲ್ಲಿ ಅವರು ಹೇಳಿದರು.
ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡ ಶಿಬಿರಾಥರ್ಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಶಿಬಿರದಲ್ಲಿ ಬಹುಸಂಖ್ಯೆಯಲ್ಲಿ ಯುವಕರು ತುಂಬು ಉತ್ಸಾಹ ದಿಂದ ಭಾಗವಹಿಸಿದ್ದರು.ವೈದ್ಯಾಧಿಕಾರಿ ಡಾ. ಶ್ರೀದೇವಿ ದೊಂಬಾಡಿ, ಡಾ. ಪೂಜಾ ಸೇರಿದಂತೆ ಗ್ರಾ.ಪಂ ಸದಸ್ಯರು, ಆಶಾ ಕಾರ್ಯಕತರ್ೆಯರು, ಆರೋಗ್ಯ ಕಾರ್ಯಕತರ್ೆಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈಶ್ವರ ಜಿ.ಸಂಪಗಾವಿ, ಕಕ್ಕೇರಿ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 