ರಕ್ತದಾನ ಮಹಾದಾನ: ಸವದತ್ತಿಯ ಬೆಳ್ಳುಬ್ಬಿ ಕಾಲೇಜಿನಲ್ಲಿ ಯಶಸ್ವಿ ರಕ್ತದಾನ ಶಿಬಿರ
Blood Donation Mahadan: A successful blood donation camp at Bellubbi College in Savadatti
ಸವದತ್ತಿ: ಅನ್ನದಾನ ಮತ್ತು ವಿದ್ಯಾದಾನಗಳಷ್ಟೇ ರಕ್ತದಾನವು ಅತ್ಯಂತ ಪವಿತ್ರವಾದ ಕೆಲಸವಾಗಿದೆ. ಒಬ್ಬ ವ್ಯಕ್ತಿ ವರ್ಷಕ್ಕೆ ನಾಲ್ಕು ಬಾರಿ ರಕ್ತದಾನ ಮಾಡುವುದರಿಂದ 12 ಜನರ ಜೀವ ಉಳಿಸಿದ ಶ್ರೇಯಸ್ಸು ಲಭಿಸುತ್ತದೆ," ಎಂದು ಬೆಳಗಾವಿಯ ಕೆ.ಎಲ್.ಇ. ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ವಿಠ್ಠಲ ಮಾನೆ ಅವರು ಅಭಿಪ್ರಾಯಪಟ್ಟರು.
ಸ್ಥಳೀಯ ಕೆ.ಎಲ್.ಇ. ಸಂಸ್ಥೆಯ ಎಸ್.ವಿ.ಎಸ್. ಬೆಳ್ಳುಬ್ಬಿ ಮಹಾವಿದ್ಯಾಲಯದ ಯೂತ್ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಎಸ್.ಎಸ್. ಘಟಕ ಹಾಗೂ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಡಾ. ಮಾನೆ ಅವರು ರಕ್ತದಾನದಿಂದ ಆಗುವ ವೈಜ್ಞಾನಿಕ ಲಾಭಗಳನ್ನು ರಕ್ತದಾನ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ.ರಕ್ತವು ತೆಳುವಾಗಿ ದೇಹದ ಎಲ್ಲಾ ಭಾಗಗಳಿಗೆ ಸುಲಭವಾಗಿ ಹರಿಯಲು ಸಹಕಾರಿಯಾಗುತ್ತದೆ.
ಹೃದಯಸ್ತಂಭನ ಪಾರ್ಶ್ವವಾಯು ಮತ್ತು ಯಕೃತ್ತಿನ ಸಮಸ್ಯೆಗಳು ಬರದಂತೆ ತಡೆಯಬಹುದು. ಈ ವೇಳೆ ಹೆನ್ರಿ ಡುನಾಂಟ್ ಅವರು1863ರಲ್ಲಿ ಯುದ್ಧದ ಗಾಯಾಳುಗಳ ಸೇವೆಗಾಗಿ ರೆಡ್‌ಕ್ರಾಸ್ ಸಂಸ್ಥೆಯನ್ನು ಸ್ಥಾಪಿಸಿದ ಇತಿಹಾಸವನ್ನು ಸ್ಮರಿಸಲಾಯಿತು. ಈ ಸಂಸ್ಥೆಯು ಜಗತ್ತಿನಾದ್ಯಂತ ಆರೋಗ್ಯ ಮತ್ತು ತುರ್ತು ಸೇವೆಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು.
ಕಾಲೇಜಿನ ಒಟ್ಟು 34 ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಉತ್ಸಾಹದಿಂದ ರಕ್ತದಾನ ಮಾಡಿದರು. ಈ ವೇಳೆ ಪ್ರಾಚಾರ್ಯ ಡಾ. ಎನ್.ಆರ್. ಸವತಿಕರ ಕೆ.ಎಲ್.ಇ. ಆಸ್ಪತ್ರೆಯ ವೈದ್ಯರಾದ ಡಾ. ಗಂಗಾಧರ, ಡಾ. ಕ್ರಿನಾ ಮೆಹತಾ, ರಮೇಶ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 