ಜಿ. ಎಚ್. ಕಾಲೇಜಿನಲ್ಲಿ ರಕ್ತದಾನ ಶಿಬಿರ
Blood Donation camp in G. H. college
ಹಾವೇರಿ, 02: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಯೂಥ್ ರೆಡ್‌ಕ್ರಾಸ್ ಮತ್ತು ಐಎಸ್‌ಆರ್ ಘಟಕಗಳ ಆಶ್ರಯದಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್, ಜಿಲ್ಲಾ ರಕ್ತನಿಧಿ ಕೇಂದ್ರ ಇವರುಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಏರಿ್ಡಸಲಾಗಿತ್ತು.
ಶಿಬಿರದಲ್ಲಿ 75 ಜನ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ರಕ್ತನಿಧಿ ಕೇಂದ್ರದ ಡಾ. ಬಸವರಾಜ ತಳವಾರ, ಬಸವರಾಜ ಕಮತರ, ಬ್ಯಾಂಕ್‌ನ ವ್ಯವಸ್ಥಾಪಕ ಲಕಮಾಜಿ ಜಗದಾಲೆ, ಪ್ರಾಚಾರ್ಯೆ ಡಾ. ಸಂಧ್ಯಾ ಕುಲಕರ್ಣಿ, ಸಂಯೋಜಕರಾದ ಡಾ. ಅಶ್ವಿನಿ ಹತ್ತಿಕಾಳ, ಡಾ. ಚೇತನಾ ಎಂ. ಕಾರ್ಯನಿರ್ವಹಿಸಿದರು. ಪ್ರೊ. ಡಿ. ಎ. ಕೊಲ್ಲಾಪುರೆ, ಡಾ. ಈ. ಬಿ. ಸೇಡಂಕರ, ಡಾ. ಜಿ. ಎಸ್. ಬಾರ್ಕಿ, ಪ್ರೊ. ಶಮಂತಕುಮಾರ ಕೆ. ಎಸ್., ಡಾ. ಪ್ರಭಾಕರ ಸಿ., ಡಾ. ಶಿವಾನಂದ ಪಾಯಮಲ್ಲೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 