ಕೆಎಲ್‌ಇ ಸಂಸ್ಥೆಯಲ್ಲಿ ರಕ್ತದಾನ ಶಿಬಿರ
Blood donation camp at KLE Institute
ಬೆಳಗಾವಿ 21 : ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಬ್ಲಡ್ ಬ್ಯಾಂಕ ಹಾಗೂ ನಗರದ ಶ್ರೀಬನಶಂಕರಿ ಶಿಕ್ಷಣಸಂಸ್ಥೆಯ ಶ್ರೀತಾತ್ಯಾ ಸಾಹೇಬ ವಿದ್ಯಾಲಯ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರವನ್ನು ಏರಿ್ಡಸಲಾಗಿತ್ತು.
ಕಿಶೋರ್ಮುಸಳೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಏರಿ್ಡಸಲಾದ ರಕ್ತದಾನ ಶಿಬಿರವನ್ನು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ರಕ್ತಭಂಡಾರ ಮುಖ್ಯಸ್ಥರಾದ ಎಸ್ ವೀವೀರಗಿ ಅವರು ಉದ್ಘಾಟಿಸಿದರು. ದಾನಿಗಳು ಮಾಡಿದ ರಕ್ತದಾನದ ಪ್ರತಿಯೊಂದು ಹನಿಯೂ ಕೂಡ ಜೀವಗಳನ್ನು ಉಳಿಸುವ ಸಾಮರ್ಥ್ಯವನ್ನು ಹೊಂದಿದೆ. ತುರ್ತು ಪರಿಸ್ಥಿತಿ, ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಬಹಳವಿರುತ್ತದೆ. ಆದ್ದರಿಂದ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕೆಂದು ಕರೆ ನೀಡಿದರು.
ಶಾಲೆಯ ಪ್ರಾಚಾರ್ಯರಾದ ಶಿಲ್ಪಾಗಾಡಗೆ ಅವರು ಮಾತನಾಡಿದರು. ಸುಮಾರು 50ಕ್ಕೂ ಅಧಿಕಜನರು ರಕ್ತದಾನ ಮಾಡಿದರು. ಶಿಬಿರದಲ್ಲಿ ಶಾಲೆಯ ಅಧ್ಯಕ್ಷರಾದ ನಾರಾಯಣ ಕಾಮಕರ ಉಪಾಧ್ಯಕ್ಷರಾದ ವಾಸುದೇವ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಸಮಾಜ ಸೇವಕರಾದ ಶಿವರಾಜ್ಪಾಟೀಲ ಸೇರಿದಂತೆ ಮೂಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 