ಎಂ.ರಾಜಶೇಖರ ಪುಣ್ಯಸ್ಮರಣೆಯಲ್ಲಿ ರಕ್ತದಾನ ಶಿಬಿರ50ಕ್ಕೂ ಹೆಚ್ಚು ದಾನಿಗಳಿಂದ ಸ್ವಯಂಪ್ರೇರಿತ ರಕ್ತದಾನ; ರಕ್ತದಾನವೇ ಶ್ರೇಷ್ಠ ದಾನ ಎಂದು ಎಂ.ಶ್ರೀದೇವಿ ಕರೆ
Blood donation camp in memory of M. Rajashekar. More than 50 donors voluntarily donated blood; M. Sr
ಬಳ್ಳಾರಿ 22: ನಗರದಲ್ಲಿ ಸಮಾಜ ಸೇವೆಯ ಅತ್ಯುತ್ತಮ ರೂಪಗಳಲ್ಲಿ ಒಂದಾದ ರಕ್ತದಾನ ಮಾನವ ಜೀವ ಉಳಿಸುವ ಮಹತ್ತರ ಕಾರ್ಯವಾಗಿದ್ದು, ಸೃಷ್ಟಿಸಲು ಅಸಾಧ್ಯವಾದ ರಕ್ತವನ್ನು ದಾನ ಮಾಡುವುದು ಎಲ್ಲ ದಾನಗಳಿಗಿಂತ ಶ್ರೇಷ್ಠವಾದದ್ದು ಎಂದು ಬಳ್ಳಾರಿ ಮೋಟರ್ಸ್ ಸೇಲ್ಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕಿ ಎಂ.ಶ್ರೀದೇವಿ ಹೇಳಿದರು.ನಗರದ ಅನಂತಪುರ ರಸ್ತೆಯ ಮಹೇಂದ್ರ ಕಾರ್ ಶೋರೂಮ್ನಲ್ಲಿ ಬಳ್ಳಾರಿ ಮೋಟರ್ಸ್ ಸೇಲ್ಸ್ ಪ್ರೈವೇಟ್ ಲಿಮಿಟೆಡ್ ಮುಖ್ಯಸ್ಥರಾಗಿದ್ದ ದಿವಂಗತ ಎಂ.ರಾಜಶೇಖರ ಅವರ ಪುಣ್ಯಸ್ಮರಣೆಯ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ” ಎಂಬ ಸ್ವಾಮಿ ವಿವೇಕಾನಂದ ಅವರ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಆರೋಗ್ಯವಂತ ವ್ಯಕ್ತಿಯೊಬ್ಬರು ರಕ್ತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ದೇಹದಲ್ಲಿ ಮತ್ತೆ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ರಕ್ತದಾನದಿಂದ ದೇಹಕ್ಕೆ ಯಾವುದೇ ಹಾನಿಯಾಗುವುದಿಲ್ಲ.
ರಕ್ತದಾನದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎನ್ನುವುದು ಕೇವಲ ತಪ್ಪು ಕಲ್ಪನೆ ಎಂದು ಅವರು ತಿಳಿಸಿದರು.ಯುವಕರು ತಮ್ಮ ಜೀವನದಲ್ಲಿ ಸ್ಪಷ್ಟ ಗುರಿ ಹೊಂದಿ ಅದನ್ನು ಸಾಧಿಸಲು ನಿರಂತರ ಪರಿಶ್ರಮ ಪಡಬೇಕು. ಇತರರ ಸಾಧನೆಯನ್ನು ಟೀಕಿಸುವ ಬದಲು ಅದನ್ನು ಪ್ರೇರಣೆಯಾಗಿ ಸ್ವೀಕರಿಸಿ ತಮ್ಮದೇ ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಹಂತವಾಗಿದ್ದು, ಪ್ರತಿಕ್ಷಣವನ್ನು ಸದುಪಯೋಗಪಡಿಸಿಕೊಂಡು ಸಮಾಜಕ್ಕೆ ಮಾದರಿಯಾಗುವ ಕಾರ್ಯಗಳಲ್ಲಿ ಭಾಗವಹಿಸಬೇಕು.
ರಕ್ತದಾನದಂತಹ ಮಾನವೀಯ ಸೇವೆಗಳು ಸಮಾಜದಲ್ಲಿ ಪರಸ್ಪರ ಸಹಕಾರ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುತ್ತವೆ ಎಂದು ಹೇಳಿದರು. ಶಿಬಿರದಲ್ಲಿ 50ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ್ದು ವಿಶೇಷವಾಗಿತ್ತು. ರಕ್ತದಾನ ಮಾಡಿದ ಎಲ್ಲಾ ದಾನಿಗಳನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.ಈ ಕಾರ್ಯಕ್ರಮದಲ್ಲಿ ಸಿಒ ಪ್ರದೀಪ್ ಹಚ್ಚಿನಾಳ್, ವ್ಯವಸ್ಥಾಪಕರಾದ ರಘುನಾಥ್, ಸುರೇಶ್, ಸಮೀರ್, ಎಎಸ್‌ಎಂ ಪರಿಚಿತ್, ಸಂತೋಷ, ಸ್ವಾಮಿ ವಿವೇಕಾನಂದ ಅರ್ಥ ಬಂಡಾರದ ವ್ಯವಸ್ಥಾಪಕರಾದ ಮಂಜುನಾಥ್, ಜಿಲ್ಲಾ ಆರೋಗ್ಯ ಇಲಾಖೆಯ ರಕ್ತ ಬಂಡಾರದ ಗೀರೀಶ್, ಮನೋಹರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 