ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.3ರಂದು ರಕ್ತದಾನ ಶಿಬಿರ
Blood donation camp on September 3 to mark Teachers' Day
ಯರಗಟ್ಟಿ, ಸೆ.1: ಶಿಕ್ಷಕರ ದಿನಾಚರಣೆ ಅಂಗವಾಗಿ ತಾಲೂಕು ಪಂಚಾಯಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ಸೆ.3ರಂದು ತಾಲೂಕು ಕೇಂದ್ರದಲ್ಲಿ ಹಮ್ಮಿಕೊಂಡಿರುವ ರಕ್ತದಾನ ಶಿಬಿರದ ಪೂರ್ವಭಾವಿ ಸಭೆ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಎಂ. ವಿ. ಗುಂಡಪ್ಪಗೋಳ, ರಕ್ತದಾನ ಶಿಬಿರದ ಮೂಲಕ ಶಿಕ್ಷಕರ ದಿನವನ್ನು ವಿಭಿನ್ನವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ದೇಶದಲ್ಲಿಯೇ ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು.
ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ವಿವಿಧ ಇಲಾಖೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿಯೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಶಿಬಿರದಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ತಾ.ಪಂ. ಇಒ ಬಸವರಾಜ ಅಯ್ಯನಗೌಡರ, ಪಂ.ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶುವೈದ್ಯಾಧಿಕಾರಿ ಎಂ.ವಿ. ಪಾಟೀಲ, ಶಿಕ್ಷಣ ಸಂಯೋಜಕ ಎಂ.ಬಿ. ಕಡಕೋಳ, ಸಿಆರ್ಿಗಳಾದ ವಸಂತ ಬಡಿಗೇರ, ಎಂ.ಎನ್. ಮಲ್ಲಕನ್ನವರ, ಬಿ.ಎಸ್. ಸಿದ್ದಬಸನ್ನವರ, ಸೋಮು ಪೂಜೇರ, ಜಿ.ಎನ್. ಮಲಕನ್ನವರ, ಶಿಕ್ಷಕರ ಸಂಘದ ನಿರ್ದೇಶಕರಾದ ಎಸ್.ಬಿ. ಮಿಕಲಿ, ಡಿ.ಎಚ್. ಭಜಂತ್ರಿ, ಎಲ್.ವೈ. ನಂದಿ, ಶ್ವೇತಾ ನೈನಾರ, ಎಸಿಡಿಪಿಒ ಚೇತನಾ ಹಳ್ಳಿ, ರಾಜ್ಯ ಸಂಪನ್ಮೂಲ ವ್ಯಕ್ತಿ ಎಂ.ಎಂ. ಚೀಲದ, ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ, ಉಪನ್ಯಾಸಕ ಎಂ.ಡಿ. ಸರದಾರ, ನರ್ಸಿಂಗ್ ಆಫೀಸರ್ ಸುನೀಲ ಕಾಶನ್ನವರ, ಹೆಸ್ಕಾಂ ಅಧಿಕಾರಿ ಮಹಾಂತೇಶ ಯರಗಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 