ರಕ್ತದಾನ ಮಹಾದಾನ: ಬಾಬು ಸಾಹುಕಾರ ಮೇತ್ರಿ
Blood donation is a noble deed: Babu Sahukar Metri
ಇಂಡಿ 7: ರಕ್ತದಾನವು ಜಗತ್ತಿನ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರ ದಾನಗಳಲ್ಲಿ ಒಂದಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಾಬು ಸಾಹುಕಾರ ಮೇತ್ರಿ ಹೇಳಿದರು. ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಜಾತ್ರೆಯ ಅಂಗವಾಗಿ ತಡವಲಗಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಾತ್ರಾ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಮಾನವ ರಕ್ತವೇ ಅಗತ್ಯವಾಗಿದ್ದು, ರಕ್ತಕ್ಕೆ ಪರ್ಯಾಯ ವಸ್ತುವನ್ನು ಉತ್ಪಾದಿಸಲು ವೈದ್ಯಕೀಯ ವಿಜ್ಞಾನದಿಂದಲೂ ಸಾಧ್ಯವಾಗಿಲ್ಲ. ಆದ್ದರಿಂದ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಮಾನವೀಯ ದೃಷ್ಟಿಯಿಂದ ರಕ್ತದಾನ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಕೃಷ್ಣ ಜಾಧವ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಳಸಿದ್ದಪ್ಪ ಬ್ಯಾಳಿ, ಸಚಿನ್ ಇಂಡಿ, ಶಿವಶಂಕರ ಹಿಳ್ಳಿ, ರವಿ ಮಸಳಿ ಸೇರಿದಂತೆ ಹಲವರು ಮಾತನಾಡಿದರು. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಹೊಸಮನಿ, ಸುನಂದಾ ವಾಲಿಕಾರ, ರವಿ ಹೊಸಮನಿ, ಅಶೋಕ ಮಿರ್ಜಿ, ಮಾದೇವಪ್ಪ ಗೊಲ್ಲಗಿ, ಪರಮೇಶ್ವರ ಬಿರಾದಾರ, ಆರೋಗ್ಯ ಇಲಾಖೆಯ ಡಾ. ಶ್ವೇತಾ, ದೀಲೀಪ್ ಸಿಂಗೆ, ಎಚ್. ಬಗಲಿ, ಡಿಜಿ ಉಮದಿ, ಸಂಜು ಬಜೆಂತ್ರಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯ ಆರಿ್ಬ. ಲಾಳಸಂಗಿ ನಿರೂಪಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 