ರಕ್ತದಾನ ಅಮೂಲ್ಯ ದಾನ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
Blood donation is a valuable donation: District Collector CN Sridhar
ರಕ್ತದಾನ ಅಮೂಲ್ಯ ದಾನ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ 29: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಮ್ಸ್ ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿ.ಪಂ. ಗದಗ ಇವರ ನೇತೃತ್ವದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಮಂಗಳವಾರ ಮೇಘಾ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ರಕ್ತದಾನವು ಅಮೂಲ್ಯ ದಾನವಾಗಿದೆ. ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸಬಹುದು ಹಾಗೂ ಅನೇಕ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ, ಡಿಎಲ್‌ಓ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಕುಟುಂಬ ಕಲ್ಯಾಣಾದಿಕಾರಿ ಡಾ. ವೈ.ಕೆ. ಭಜಂತ್ರಿ, ಡಾ.ಎಸ್.ಸುಸ್ಮಿತಾ, ಡಾ.ಸಾಗರ ಪಟ್ಟೇದ, ಡಾ. ಸಾಕ್ಷಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ, ಡಿ.ಎಲ್ ಓ ಡಾ. ರಾಜೇಂದ್ರ ಬಸರಿಗಿಡದ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ. ಸಿಬ್ಬಂದಿಗಳು ರಕ್ತದಾನದಲ್ಲಿ ಪಾಲ್ಗೊಂಡರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 