ರಕ್ತದಾನವೇ ಶ್ರೇಷ್ಠ ದಾನ; ಜೀವ ಉಳಿಸುವ ಮಹಾದಾನ: ನವೀನ್ ಎನ್.
Blood donation is the greatest donation; a great donation that saves lives: Naveen N.
ಲೋಕದರ್ಶನ ವರದಿ
ಬೆಳಗಾವಿ 14 : ದಾನ ದಾನಗಳಲ್ಲಿ ಶ್ರೇಷ್ಟವಾದ ದಾನವೆಂದರೆ ಅದು ರಕ್ತ ದಾನ, ನಾವು ಜೀವಂತವಿರುವಾಗ ಪದೆ ಪದೆ ನಮ್ಮ ದೇಹದಿಂದ ಕೊಡಬಹುದಾದ ಏಕೈಕ ದಾನವೆಂದರೆ ಅದು ರಕ್ತ ದಾನ ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ನವಿನ್ ಎನ್ ಅವರು ಮಾತನಾಡುತ್ತಿದ್ದರು. ಅವರು ಇಂದು ನಗರದ ಯಳ್ಳೂರ ರಸ್ತೆಯಲ್ಲಿನ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ರಕ್ತ ಭಂಡಾರದಲ್ಲಿ ನಡೆದ ವಿಶ್ವ ರಕ್ತ ದಾನಿಗಳ ದಿನಾಚರಣೆಯ ಅಂಗವಾಗಿ ಮಾತನಾಡುತ್ತಿದ್ದರು. ವೈದ್ಯ ವಿಜ್ಞಾನವು ಎಷ್ಟೇ ಮುಂದುವರೆದರೂ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾದ್ಯವಾಗುತ್ತಿಲ್ಲಾ, ಆದ್ದರಿಂದ ಎಲ್ಲರೂ ರಕ್ತದಾನ ಮಾಡಿ ಇನ್ನೊಂದು ಜೀವಕ್ಕೆ ಆಧಾರವಾಗಿ ಎಂದು ಕರೆ ನಿಡಿದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರುಗಳಾದ ಡಾ.ಸಂಜಯ ಕಂಬಾರ ಅವರು ಮಾತನಾಡುತ್ತ ರಕ್ತದಾನವು ಜೀವದಾನಕ್ಕೆ ಸಮಾನವಾದ ಮಹಾದಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು ಅನೇಕರಿಗೆ ರಕ್ತದ ಅವಶ್ಯಕತೆ ಇರುವುದು ಹಿಗಾಗಿ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅನೇಕರ ಜೀವ ಉಳಿಸಬಹುದು.
ಆದರೆ ಎಷ್ಟೋ ಜನರಿಗೆ ರಕ್ತದಾನ ಮಾಡುವದರ ಬಗ್ಗೆ ಅವೈಜ್ಞಾನಿಕವಾದ ಪರಿಕಲ್ಪಣೆಗಳು ಬಹಳಷ್ಟಿವೆ. ರಕ್ತ ದಾನದಿಂದ ನಮ್ಮ ದೇಹದಲ್ಲಿನ ರಕ್ತ ಕಡಿಮೆಯಾಗುತ್ತದೆ, ನಮ್ಮ ಶಕ್ತಿ ಕುಂದುತ್ತದೆ, ಹೀಗೆ ಅನೇಕ ಗೊಂದಲಗಳನ್ನು ತಮ್ಮ ಮನದಲ್ಲಿ ತುಂಬಿಕೊಂಡಿರುತ್ತಾರೆ ಅದನ್ನೆಲ್ಲಾ ಮೆಟ್ಟಿ ನಿಂತು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವದನ್ನು ಪ್ರೇರೇಪಿಸಬೇಕಾಗಿದೆ ಎಂದು ತಿಳುವಳಿಕೆ ನೀಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 