ಇಸ್ಲಾಮಾಬಾದ್, ನ 18 : ಪಾಕಿಸ್ತಾನದ ಪೂರ್ವ ಜಿಲ್ಲೆಯಾದ ಒಕಾರಾದ ಸಟ್ಲೆಜ್ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಮಲ್ಹು ಶೇಖಾ ಪ್ರದೇಶದ ಬಳಿ ಜನರು ದೋಣಿಯಲ್ಲಿ ನದಿ ದಾಟುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ. ರಕ್ಷಣಾ ಅಧಿಕಾರಿಗಳ ಪ್ರಕಾರ, ಎಂಟು ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಇತರರಿಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ. ದುರಂತದ ವೇಳೆ ದೋಣಿಯಲ್ಲಿ ಒಟ್ಟು 40 ಜನರಿದ್ದರು. ನಾಪತ್ತೆಯಾದ ಇತರರಿಗೆ ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತಕ್ಕ ಕಾರಣವೇನೆಂಬುದು ಇದುವರೆಗೆ ಗೊತ್ತಾಗಿಲ್ಲ. ಮಾಹಿತಿ ದೊರೆತ ಕೂಡಲೇ ಜಿಲ್ಲಾಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಸ್ಥಳೀಯರು ರಕ್ಷಣಾ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.