ಪಾಳುಬಿದ್ದ ಪೆಟ್ರೋಲ್ ಬಂಕ್ ಕಚೇರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
Body of unidentified man found in dilapidated petrol station office
ಲೋಕದರ್ಶನ ವರದಿ
ಜಮಖಂಡಿ 21: ನಗರದ ದೇಸಾಯಿ ಸರ್ಕಲ್ ಬಳಿ ಸ್ಕೈ ಬಾರ್ ಸಮೀಪದ ಪಾಳುಬಿದ್ದ ರಿಲಯನ್ಸ್ ಪೆಟ್ರೋಲ್ ಬಂಕ್ ಕಚೇರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಸ್ಥಳೀಯರು ರಿಲಯನ್ಸ್ ಪೆಟ್ರೋಲ್ ಬಂಕ್ನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪರೀಶೀಲಿಸಿದ ಬಳಿಕ ಶವ ಪತ್ತೆಯಾಗಿದ್ದು, ಕೂಡಲೇ ಶಹರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಶಹರ ಪೊಲೀಸ್ ಠಾಣೆಯ ಪಿಎಸ್ಐ ಅನೀಲ ಕುಂಬಾರ ಸಿಬ್ಬಂದಿಗಳಾದ ಶೇಖರ ನಾಯಿಕ, ಶಿವಾನಂದ ಪಾಟೀಲ, ಲೋಕೇಶ್ ಯಳಶೆಟ್ಟಿ ಶಂಕರ ಆಸಂಗಿ, ರಾಜು ಪೂಜೇರಿ, ಮಲ್ಲು ಕೋಲಾರ, ಸದಾಶಿವ ತೇಲಿ ಸೇರಿ ಪರೀಶೀಲನೆ ನಡೆಸಿದ್ದಾರೆ. ಅಪರಿಚಿತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 