ಅಪರಿಚಿತ ವ್ಯಕ್ತಿ ಶವ ಪತ್ತೆ
Body of unidentified person found
ಬೆಳಗಾವಿ,ಜು.23: ನಗರದ ಬಳ್ಳಾರಿ ನಾಲೆಯ ಉಪಕಾಲುವೆಯಲ್ಲಿ ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯು ನಾಲೆಯಲ್ಲಿ ಬಿದ್ದು ಮರಣ ಹೊಂದಿದ್ದಾನೆ ಎಂದು ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಅಪರಿಚಿತ ವ್ಯಕ್ತಿ ಸುಮಾರು 40 ರಿಂದ 45 ವರ್ಷ ವಯಸ್ಸಿನವನಾಗಿದ್ದು, ಶವವು ಕೊಳೆತು ಉಬ್ಬಿದಂತಾಗಿದೆ. ಚಹರೆ ಗುರುತು ಸಿಗುತಿಲ್ಲ. ಮೃತ ವ್ಯಕ್ತಿ 5.4 ಅಡಿ ಎತ್ತರ, ಕಂದು ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೃತನ ದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿರುತ್ತದೆ.
ಮೃತನ ವಾರಸುದಾರರ ಬಗ್ಗೆ ಮಾಹಿತಿ ದೊರತಲ್ಲಿ ನಗರದ ಶಹಾಪೂರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 0831-2405244 ಅಥವಾ ಪಿ,ಐ ಶಹಾಪೂರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 9480804046 ಗೆ ಸಂಪರ್ಕಿಸಬಹುದಾಗಿದೆ ಎಂದು ಶಹಾಪೂರ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 