ಬಾಲಿವುಡ್ ನಟ ಸೈಫ್ ಅಲಿ ಖಾನ್ರಿ ಗೆ ಚೂರಿ ಇರಿತ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ
Bollywood actor Saif Ali Khan stabbing case: Accused sent to judicial custody for 14 days
ಮುಂಬೈ 29: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚೂರಿ ಇರಿತ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಾಂಗ್ಲಾದೇಶಿ ಪ್ರಜೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ 30 ವರ್ಷದ ಮೊಹಮ್ಮದ್ ಶರೀಫುಲ್ ಇಸ್ಲಾಂ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದರಿಂದ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ಆತನ ಪೊಲೀಸ್ ಕಸ್ಟಡಿ ಇನ್ನೆರಡು ದಿನ ವಿಸ್ತರಿಸಬೇಕು ಎನ್ನುವ ಮನವಿಯನ್ನು ಕೋರ್ಟ್ ಮಾನ್ಯ ಮಾಡಲಿಲ್ಲ.
ಆರೋಪಿ 10 ದಿನಗಳಿಗೂ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಎಂದು ಗಮನಿಸಿ ನ್ಯಾಯಾಲಯವು, ಪೊಲೀಸರ ಮನವಿಯನ್ನು ತಿರಸ್ಕರಿಸಿತು.
ಸಲ್ಲಿಸಲಾದ ದಾಖಲೆಯು ತನಿಖೆ ಮುಗಿದಿದೆ ಎನ್ನುವುದನ್ನು ತೋರಿಸುತ್ತಿದೆ. ಕಸ್ಟಡಿಗೆ ನೀಡಲು ಯಾವುದೇ ಹೊಸ ಕಾರಣ ಕಂಡುಬಂದಿಲ್ಲ. ಹೊಸದೇನಾದರೂ ಬೆಳಕಿಗೆ ಬಂದರೆ ಅನುಮತಿ ಅವಧಿಯೊಳಗೆ ಪೊಲೀಸರು ಮತ್ತೆ ಆತನನ್ನು ಕಸ್ಟಡಿಗೆ ಪಡೆಯಬಹುದು ಎಂದು ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 