ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ : ಶ್ವಾನದಳದಿಂದ ತಪಾಸಣೆ
Bomb threat to Karwar District Court: Dog squad inspects
ಕಾರವಾರ 24 : ಜಿಲ್ಲಾ ಕೇಂದ್ರ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಇಟ್ಟು ಕಟ್ಟಡ ಸ್ಪೋಟಿಸುವ ಬೆದರಿಕೆ ಬಂದಿದ್ದು, ಕೋರ್ಟ ಆವರಣದಲ್ಲಿ ಕೆಲ ಕಾಲ ಆತಂಕ ನಿರ್ಮಾಣವಾಗಿತ್ತು. ಅಜಮಲ್ .ಕಸಬ್ ಅ ಅಟೋಮ್ಯಾಟಿಕ್ ಮೇಲ್ ಎಂಬ ಇ-ಮೇಲ್ ವಿಳಾಸದಿಂದ ಬೆದರಿಕೆ ಸಂದೇಶ ಬಂದಿದ್ದು, ಸಂದೇಶದಲ್ಲಿ ಕೆಲ ಆರೋಪಗಳ ಉಲ್ಲೇಖ ಮಾಡಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ. ಇ-ಮೇಲ್ನಲ್ಲಿ ತಮಿಳುನಾಡಿನ ರಾಜಕೀಯ ಮುಖಂಡ ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸುವ ಚೆನ್ನೈ ಪತ್ರಕರ್ತರ ಕುರಿತು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.
ಉದಯನಿಧಿ ಸ್ಟಾಲಿನ್ ಅವರ ಬಗ್ಗೆ ಈಮೇಲ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಆದರೆ ಈ ಆರೋಪಗಳ ಕುರಿತು ಯಾವುದೇ ಎಫ್ಐಆರ್ ದಾಖಲಾಗಿಲ್ಲ ಎಂದು ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಬಾಂಬ್ ಬೆದರಿಕೆ ಮಾಹಿತಿ ತಿಳಿಯುತ್ತಿದ್ದಂತೆ, ಕಾರವಾರ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ತೆರಳಿ ಪರೀಶೀಲನೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಇ-ಮೇಲ್ ಬೆದರಿಕೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 