ಬೊಮ್ಮನಹಳ್ಳಿ ಪಿಕೆಪಿಎಸ್ ನೂತನ ಅಧ್ಯಕ್ಷ ಬಿರಾದಾರಗೆ ಸನ್ಮಾನ
Bommanahalli PKPS's new president, Biradara, is felicitated
ತಾಳಿಕೋಟಿ 07 : ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ನೂತನವಾಗಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಡಿವಾಳಪ್ಪ (ಮಡುಸೌಕಾರ) ಬಿರಾದಾರ ಇವರನ್ನು ಮಿಣಜಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಮಡುಸೌಕಾರ ಬಿರಾದಾರ ಅವರು ಇವತ್ತು ಸಂಘದ ಆಡಳಿತ ಮಂಡಳಿ ಸದಸ್ಯರ ಜೊತೆಗೆ ತಾವೆಲ್ಲರೂ ಸಹಕರಿಸಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೀರಿ ನಿಮ್ಮ ಈ ಪ್ರೀತಿ ವಿಶ್ವಾಸಕ್ಕೆ ಚಿರಋಣಿಯಾಗಿರುವೆ. ನನ್ನ ಈ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದರು. ಈ ಸಮಯದಲ್ಲಿ ಗಣ್ಯರಾದ ಗುರ್ಪಗೌಡ ಪಾಟೀಲ, ಶ್ರೀಶೈಲ್ ವಜ್ಜಲ,ಜಿ.ಬಿ.ಪಾಟೀಲ, ಗೊಟಖಂಡಕಿ ಎಸ್ಡಿಎಂಸಿ ಅಧ್ಯಕ್ಷ ಬಸನಗೌಡ ಬಿರಾದಾರ, ಮಹಾಂತೇಶ ಬಿರಾದಾರ, ಶರಣಗೌಡ ಬಿರಾದಾರ, ಗೀರೀಶ ತಳವಾರ ಹಾಗೂ ಬಸನಗೌಡ ಬಿರಾದಾರ ಮತ್ತಿತರರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 