ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ
Book Invitation for Pt. Puttaraja Sahitya Puraskar
ಗದಗ: ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ 23 ವರ್ಷಗಳಿಂದಲೂ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಪ್ರಶಸ್ತಿಗಾಗಿ 2024 -25 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ. ಆದರೆ, ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿ ಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.
ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿ ಕರ್ತರಿಗೆ ದಾಂಡೇಲಿಯಲ್ಲಿ ಹಮ್ಮಿಕೊಂಡಿರುವ ಡಾ. ಪಂ. ಪುಟ್ಟರಾಜರ ಪುಣ್ಯಸ್ಮರಣೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಮತ್ತು ಇದೇ ಸಂದರ್ಭದಲ್ಲಿ ಪ್ರಶಸ್ತಿಗೆ ಸಮೀಪದ ಪ್ರತಿ ಸ್ಪರ್ದಿಯಾದ ವಿವಿದ ಪ್ರಕಾರದ 10 ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿ ರತ್ನ ಸಮ್ಮಾನ ನೀಡಿ ಗೌರವಿಸಲಾಗುವುದು. ಎಂದು ಸೇವಾ ಸಮಿತಿಯ ರಾಜ್ಯ ಸಂಚಾಲಕರು ಮತ್ತು ಸಾಹಿತ್ಯ ಪುರಸ್ಕಾರ ಆಯ್ಕೆ ಸಮಿತಿಯ ಸದಸ್ಯ ಸಂಚಾಲಕರೂ ಆಗಿರುವ, ಆಕಾಶವಾಣಿ ದೂರದರ್ಶನ ಕಲಾವಿದೆ ಡಾ. ಸುಮಾ ಹಡಪದ ಹಳಿಯಾಳ ಇವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿಕೊಂಡಿದ್ದಾರೆ.
ಆಸಕ್ತ ಲೇಖಕರು ತಮ್ಮ ಭಾವಚಿತ್ರ ಸಹಿತ ಪರಿಚಯ ಪತ್ರ, ಎಪ್ರೀಲ್ 1, 2024 ರಿಂದ 2025 ಮಾರ್ಚ 31 ರ ಒಳಗಾಗಿ ಪ್ರಕಟವಾದ 3 ಕೃತಿಗಳೊಂದಿಗೆ 15 ಆಗಷ್ಟ 2025 ರ ಒಳಗಾಗಿ ತಲುಪುವಂತೆ ಕಳಿಸಿಕೊಡಲು ಕೋರಲಾಗಿದೆ. ಪುಸ್ತಕಗಳನ್ನು ಕಳಿಸಿಕೊಡುವ ವಿಳಾಸ, ಸಿ. ಕೆ. ಹೆಚ್ ಶಾಸ್ತ್ರೀ (ಕಡಣಿ) ಸದಸ್ಯರು: ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ ‘ಸಮನ್ವಯ’ ್ಖ 332, ಕೆ. ಹೆಚ್. ಬಿ. ಕಾಲೋನಿ, ರಾಜೀವ ಗಾಂಧಿ ನಗರ, ಗದಗ - 582101 ವಾಟ್ಸಪ್ ನಂಬರ: 9886717732
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 