ಪಿಯುಸಿ ಫಲಿತಾಂಶ ಸುಧಾರಣೆಗೆ ಬೂಸ್ಟರ್ ಕ್ಲಾಸ್
Booster class to improve PUC results
ಹೂವಿನಹಡಗಲಿ 13: ಫಲಿತಾಂಶ ಸುಧಾರಣೆಗೆ ಇಲಾಖೆ ಹಲವು ಪರಿಣಾಮಕಾರಿಯಾದ ಕ್ರಮಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಸಮರ್ಥವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಬೂಸ್ಟರ್ ತರಗತಿ ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಎ ಕೊಟ್ರಗೌಡ ಹೇಳಿದರು.ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಯ ಕ್ರಮದ ಭಾಗವಾಗಿ ಬೂಸ್ಟರ್ ತರಗತಿ ಉದ್ಘಾಟಿಸಿ ಅವರು ಮಾತನಾಡಿದರು.ದ್ವಿತೀಯ ಪಿಯುಸಿ ಜೀವನದ ಪ್ರಮುಖ ಘಟ್ಟ. ಪರೀಕ್ಷೆ ಹತ್ತಿರ ಇರುವ ಸಂದರ್ಭದಲ್ಲಿ ಈ ತರಹದ ವಿಶೇಷ ತರಬೇತಿಫಲಿತಾಂಶ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಹೊಸಪೇಟೆಯ ಗಣಿತಶಾಸ್ತ್ರ ಉಪನ್ಯಾಸಕರಾದ ಲೇಪಾಕ್ಷಿ ಜವಳಿ ಅವರು ಎರಡು ದಿನಗಳ ಕಾಲ ಪರೀಕ್ಷಾ ದೃಷ್ಟಿಯಿಂದ ಹಾಗೂ ಸಿ ಇ ಟಿ ದೃಷ್ಟಿಯಿಂದ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ಮಾಡಿದರು.ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಹೊಸಪೇಟೆಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾದ ಲಿಂಗರಾಜ್ ಇವರು ಮಾದರಿ ಪ್ರಶ್ನೆ ಪತ್ರಿಕೆಗಳು ಹಾಗೂ ವಿಷಯದಲ್ಲಿ ಹೆಚ್ಚು ಅಂಕ ಗಳಿಸುವ ಬಗ್ಗೆ ತರಬೇತಿ ನೀಡಿದರು. ಸೋಗಿಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳೂ ಕೂಡ ಬೂಸ್ಟರ್ ತರಗತಿಯಲ್ಲಿ ಭಾಗವಹಿಸಿದ್ದರು.ಉಪನ್ಯಾಸಕರಾದ ಗುರುಬಸವರಾಜ್, ಬಸೆಟ್ಟಿ ಪ್ರಕಾಶ್, ನಟರಾಜ್, ಶಿವಕುಮಾರ್, ದುಶ್ಯಂತ್, ಇತರರು ಭಾಗವಹಿಸಿದ್ದರು.ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 