ಗ್ರಾಮೀಣ ಉದ್ಯೋಗಕ್ಕೆ ಉತ್ತೇಜನ: ವಿಕಸಿತ ಭಾರತ ಗ್ಯಾರಂಟಿ ಯೋಜನೆಗೆ ಚಾಲನೆ
Boosting Rural Employment: 'Vikasit Bharat Guarantee Scheme' Launched
ಬಳ್ಳಾರಿ 13: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆ ಜುಲೈ 1ರಿಂದ ಅಧಿಕೃತವಾಗಿ ಆರಂಭವಾಗಿದ್ದು, ಗ್ರಾಮೀಣ ಪ್ರದೇಶದ ಅಕುಶಲ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಕುರುಗೋಡು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಪ್ರಭಾರ) ರೇಣುಕಾಚಾರ್ಯ ಸ್ವಾಮಿ ಹೇಳಿದರು.
ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾದನಹಟ್ಟಿ ಗ್ರಾಮದ ಉಡಸಲಮ್ಮ ದೇವಸ್ಥಾನದ ಮುಂಭಾಗದಲ್ಲಿ ಸೋಮವಾರ ಆಯೋಜಿಸಿದ್ದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯ ಐಇಸಿ ಚಟುವಟಿಕೆಯಡಿ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಈ ಯೋಜನೆಯಡಿ ಕೂಲಿ ಕಾರ್ಮಿಕರ ದಿನಗೂಲಿ ಮೊತ್ತವನ್ನು ರೂ.370ರಿಂದ ರೂ.382ಕ್ಕೆ ಹೆಚ್ಚಿಸಲಾಗಿದೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ ನೀಡಲಾಗುತ್ತಿದ್ದ 100 ದಿನಗಳ ಉದ್ಯೋಗಾವಕಾಶವನ್ನು ಮುಂದಿನ ದಿನಗಳಲ್ಲಿ 125 ದಿನಗಳಿಗೆ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಯೋಜನೆಯ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದ ಅವರು, ಯೋಜನೆಯ ಪ್ರಮುಖ ಅಂಶಗಳು ಹಾಗೂ ಮಾಹಿತಿಯುಳ್ಳ ಅಧಿಕೃತ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಿದರು. ಬಳಿಕ ಗಣ್ಯರು ಎಸ್ಬಿಎಂ ವಾಹನದ ಮೂಲಕ ಹಸಿರು ನಿಶಾನೆ ತೋರಿಸಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕರು (ಗ್ರಾ.ಉ) ಶಿವರಾಮರೆಡ್ಡಿ, ಬಾದನಹಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿಲ್ ಕುಮಾರ್ ಹೆಚ್., ತಾಲೂಕು ಐಇಸಿ ಸಂಯೋಜಕ ಚಂದ್ರಶೇಖರ್, ತಾಲೂಕು ಪಂಚಾಯಿತಿ ತಾಂತ್ರಿಕ ಸಹಾಯಕರು, ಬಿಎಫ್ಟಿ ಸಿಬ್ಬಂದಿ, ಎನ್ಆರ್ಎಲ್ಎಂ ತಂಡದ ಸದಸ್ಯರು, ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರು, ಗ್ರಾಮ ಕಾಯಕ ಮಿತ್ರರು, ಗ್ರಾಪಂ ಸಿಬ್ಬಂದಿ, ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 