ಪೌಷ್ಟಿಕ ಆಹಾರದಿಂದ ರೋಗನಿರೋಧಕ ಶಕ್ತಿ ಹೆಚ್ಚಳ: ಎಚ್‌.ಆರ್‌. ಲವಕುಮಾರ

ಪೌಷ್ಟಿಕ ಆಹಾರದಿಂದ ರೋಗನಿರೋಧಕ ಶಕ್ತಿ ಹೆಚ್ಚಳ: ಎಚ್‌.ಆರ್‌. ಲವಕುಮಾರ  Boosting immunity through nutritious food: H.R. Lavakumar

ಲೋಕದರ್ಶನ ವರದಿ 

ಯರಗಟ್ಟಿ ಜುಲೈ 5: ಸಂಸ್ಕರಿಸಿದ ಆಹಾರ, ಅಧಿಕ ಸಕ್ಕರೆ ಹಾಗೂ ಎಣ್ಣೆ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಿ, ವಿಟಮಿನ್ ಮತ್ತು ಖನಿಜಾಂಶಯುಕ್ತ ಪೌಷ್ಟಿಕ ಆಹಾರ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಜಿಲ್ಲಾ ನಿರ್ದೇಶಕ ಎಚ್‌.ಆರ್‌. ಲವಕುಮಾರ ಹೇಳಿದರು.   

ಸಮೀಪದ ಕೋ. ಶಿವಾಪುರ ಗ್ರಾಮದಲ್ಲಿರುವ ಹಿರೇಮಠ ಆವರಣದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ಪೌಷ್ಟಿಕ ಆಹಾರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  

ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ಆರೋಗ್ಯಕರ ಆಹಾರ ಪದ್ಧತಿಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.  

ಗ್ರಾಮದ ಸಮುದಾಯ ಆರೋಗ್ಯಾಧಿಕಾರಿ ವಿರೇಶ ನಾಯ್ಕ ಮಾತನಾಡಿ, ಹಣ್ಣು, ತರಕಾರಿ ಹಾಗೂ ಧಾನ್ಯಗಳನ್ನು ದೈನಂದಿನ ಆಹಾರದಲ್ಲಿ ಹೆಚ್ಚಾಗಿ ಸೇರಿಸಿಕೊಳ್ಳಬೇಕು. ಆರೋಗ್ಯಕರ ಆಹಾರದೊಂದಿಗೆ ಯೋಗಾಭ್ಯಾಸಕ್ಕೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.  

ಹಿರೇಮಠ ಸಂಸ್ಥಾನದ ಜಡೆತಲೆ ಶಿವಾಚಾರ್ಯ ಮಹಾಸ್ವಾಮಿಗಳು ಗ್ರಾಮೀಣ ಮಹಿಳೆಯರ ಸಬಲೀಕರಣ ಮತ್ತು ಜಾಗೃತಿಗಾಗಿ ಜ್ಞಾನವಿಕಾಸ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ಕೇಂದ್ರದ ಸದಸ್ಯರಿಗಾಗಿ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ ಏರಿ​‍್ಡಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ಜ್ಞಾನವಿಕಾಸ ಸಮನ್ವಯಾಧಿಕಾರಿಗಳು, ಮಹಿಳಾ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.